ಶಾಲೆ ಅಭಿವೃದ್ಧಿಗೆ ಹೊರಟ್ಟಿ ವಿಶೇಷ ಕಾಳಜಿ : ಬಸವರಾಜ

0
15
loading...

ಕನ್ನಡಮ್ಮ ಸುದ್ದಿ-ಮುಂಡರಗಿ: ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಗೆ ಬಸವರಾಜ ಹೊರಟ್ಟಿ ಅವರು ವಿಶೇಷ ಕಾಳಜಿ ವಹಿಸುತ್ತಿದ್ದು, ಅಗತ್ಯವಿರುವ ಶಾಲೆಳಿಗೆ ಸಾಕಷ್ಟು ಅನುದಾನ ನೀಡುತ್ತಲಿದ್ದಾರೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಧಾರವಾಡ ಹೇಳಿದರು.
ಪಟ್ಟಣದ ಡಾ.ಬಿ.ಆರ್‌.ಅಂಬೇಡ್ಕರ್‌ ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಟ್ಟಣದ ಅಂಬೇಡ್ಕರ್‌ ಶಾಲೆಯ ಅಭಿವೃದ್ಧಿಗೆ ಹೊರಟ್ಟಿ ಅವರು 6.16ಲಕ್ಷ ರೂಪಾಯಿ ಅನುದಾನ ನೀಡಿದ್ದಾರೆ ಎಂದು ತಿಳಿಸಿದರು.
ಪುರಸಭೆ ವ್ಯಾಪ್ತಿಯ ಶಿರೂಳ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಾಳಿದಾಸ ಸಮುದಾಯ ಭವನಕ್ಕೆ 5ಲಕ್ಷ ರೂಪಾಯಿ ಅನುದಾನ ನೀಡಲಾಗಿದೆ. ಅಗತ್ಯವಿರುವ ಎಲ್ಲಾ ಶಾಲೆಗಳಿಗೆ ಮುಂಬರುವ ದಿನಗಳಲ್ಲಿ ವಿಶೇಷ ಅನುದಾನವನ್ನು ಮಂಜೂರು ಮಾಡಲು ಅವರು ಸಿದ್ಧರಿದ್ದಾರೆ ಎಂದು ತಿಳಿಸಿದರು.
ವೈ.ಎನ್‌.ಗೌಡರ ಮಾತನಾಡಿ, ಬಸವರಾಜ ಹೊರಟ್ಟಿ ಅವರು ಅವ್ವ ಟ್ರಷ್ಟ ಮೂಲಕ ನಾಡಿನಾಧ್ಯಂತ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಮುಂದಿನ ವರ್ಷ ಅವ್ವ ಟ್ರಷ್ಟ ಸಮಾರಂಭವನ್ನು ಮುಂಡರಿಗಿಯಲ್ಲಿ ಹಮ್ಮಿಕೊಳ್ಳಬೇಕು. ಅದಕ್ಕೆ ತಗುಲುವ ಖರ್ಚು ವೆಚ್ಚಗಳನ್ನು ಮುಂಡರಗಿಯ ಜನತೆ ಭರಿಸಲಿದ್ದಾರೆ ಎಂದು ಮನವಿ ಮಾಡಿಕೊಂಡರು.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎ.ಹಿರೇಮಠ ಮಾತನಾಡಿ, ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಅವ್ವ ಟ್ರಷ್ಟ ರಾಜ್ಯದ ವಿವಿಧ ಭಾಗಗಳಲ್ಲಿ ಸುಮಾರು 10ಬಡ ಕುಟುಂಬಗಳನ್ನು ದತ್ತು ತಗೆದುಕೊಂಡಿದ್ದು, ಅವರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಅವರು ಈ ಭಾಗಕ್ಕೆ ಇನ್ನೂ ಹಲವಾರು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಜಿಲ್ಲಾ ಗೌರವಾಧ್ಯಕ್ಷ ಬಸವರಾಜ ಧಾರವಾಡ, ಎಂ.ಎಸ್‌.ಕೊಟಗಿ, ವೈ.ಎನ್‌.ಗೌಡರ ಅವರನ್ನು ಸನ್ಮಾನಿಸಿದರು. ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಆರ್‌.ಎಲ್‌.ಪೊಲೀಸಪಾಟೀಲ, ಎಸ್‌.ಎಂ.ಕೊಟಗಿ, ಆರ್‌.ಬಿ.ಹಕ್ಕಂಡಿ ಸಂತೋಷ ಭಾವಿಮನಿ, ಹಾಜರಿದ್ದರು.

loading...