ಶಿವಾಜಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

0
25
loading...

ಕನ್ನಡಮ್ಮ ಸುದ್ದಿ-ಕಾರವಾರ: ಯುವಕರು ಸಮಯದ ಸದುಪಯೋಗ ಪಡೆದುಕೊಂಡು ಆತ್ಮವಿಶ್ವಾಸದಿಂದ ಬದುಕನ್ನು ರೂಪಿಸಕೊಳ್ಳಬೇಕೆಂದು ಆಕಾಶವಾಣಿ ಕಾರವಾರ ಕೇಂದ್ರದ ಕಾರ್ಯಕ್ರಮ ನಿರ್ವಾಹಕಿ ಪ್ಲೋರಿನ್‌ರೋಶ್‌ ಹೇಳಿದರು.
ಅವರು ನಗರದ ಬಾಡ್‌ನ ಶಿವಾಜಿ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಕಾರವಾರ ಆಕಾಶವಾಣಿಯ ಹಿರಿಯ ಉದ್ಘೋಷಕಿ ಅನ್ನಪೂರ್ಣ ಹೂಗಾರ್‌ ಮಾತನಾಡಿ, ವಿದ್ಯಾರ್ಥಿಗಳು ಜೀವನ ಕಲಿಸುವ ಪಾಠವನ್ನು ಬದುಕಿನಲ್ಲಿ ಅಳವಡಿಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ತಿಳಿಸಿದರು. ಪ್ರಾಚಾರ್ಯ ಡಾ.ಶಿವಾನಂದ.ವಿ.ನಾಯಕ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜ ಕಟ್ಟುವಲ್ಲಿ ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಮಹತ್ವವಾದ ಪಾತ್ರದ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಡಾ.ಮಾಧವಿ ಗಾಂವಕರ ಸ್ವಾಗತಿಸಿದರು. ವಿದ್ಯಾರ್ಥಿನಿ ದೀಪಿಕಾ ರಾಯ್ಕರ ಅತಿಥಿಗಳನ್ನು ಪರಿಚಯಿಸಿದರು. ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ನಾಯ್ಕ ವಂದಿಸಿದರು. ವಿದ್ಯಾರ್ಥಿನಿ ಅಕ್ಷತಾ ಗಾಂವಕರ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಶಂಕರ ಚಾಪೋಲೇಕರ ಮತ್ತು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

loading...