ಸಮಸ್ಯೆಮುಕ್ತ ಕ್ಷೇತ್ರ ನಿರ್ಮಾಣಕ್ಕೆ ಪಣ: ಉಮೇಶ ಕತ್ತಿ

0
39
loading...

ಸಂಕೇಶ್ವರ 10 : ನನ್ನ ಮೇಲೆ ವಿಶ್ವಾಸವಿಟ್ಟು ಚುನಾಯಿಸಿದ ಜನರ ಕುಂದು-ಕೊರತೆಗಳಿಗೆ ಸ್ಪಂದಿಸುವ ಮೂಲಕ ಸರಕಾರದ ಯೋಜನೆ ಅನುಷ್ಠಾನದ ಮೂಲಕ ಸಮಸ್ಯೆ ಮುಕ್ತ ಕ್ಷೇತ್ರವಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಉಮೇಶ ಕತ್ತಿ ಹೇಳಿದರು.ಕಣಗಲಾ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬುಗಟಿಆಲೂರದಿಂದ ರಾಷ್ಟ್ರೀಯ ಚತುಷ್ಪಥ ರಸ್ತೆಯವರೆಗಿನ 60 ಲಕ್ಷ ರೂ. ಅಂದಾಜು ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಶಾಸಕ ಉಮೇಶ ಕತ್ತಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಾಶುಗರ ಚೇರಮನ್‌ ಎಸ್‌.ಎಸ್‌.ಶಿರಕೋಳಿ, ಸಂಗಮ ಕಾರಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ, ಎಪಿಎಂಸಿ ಅಧ್ಯಕ್ಷ ಪ್ರಶಾಂತ ಪಾಟೀಲ, ಸಹಾಯಕ ಅಭಿಯಂತ ಅಜೀತ ಪಾಟೀಲ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ವಿ.ಎನ್‌.ಪಾಟೀಲ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

loading...