ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯ ನಿವಾರಣೆಗೆ ಸ್ವತಂತ್ರ್ಯ ಯೂನಿಯನ್‌ ಸ್ಥಾಪನೆ: ಅನೀತಾ

0
20
loading...

ಕಾರವಾರ: ಅಂಗನವಾಡಿ ಕಾರ್ಯಕರ್ತರೆಯರ ಸಮಸ್ಯೆಗಳ ನಿವಾರಣೆಗೆ ಹಾಗೂ ಅವರ ಹಕ್ಕು, ಬಾಧ್ಯತೆಗಳನ್ನು ಹೋರಾಟದ ಮೂಲಕ ಪಡೆಯಲು ರಾಜಕೀಯೇತರ ಸ್ವತಂತ್ರ ಸಂಘಟನೆಯ ಅಗತ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸ್ವತಂತ್ರ ಯೂನಿಯನ್‌ ಸ್ಥಾಪಿಸಲಾಗಿದೆ ಎಂದು ರಾಜ್ಯಾಧ್ಯಕ್ಷೆ ಅನೀತಾ ಎ.ಶೇಟ್‌ ಹೇಳಿದರು.
ಅವರು ಇಲ್ಲಿನ ಪತ್ರಿಕಾ ಭವನದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ 1973 ರಿಂದ ಅಂಗನವಾಡಿ ಕಾರ್ಯಕರ್ತೆಯರು ಅತೀ ಕಡಿಮೆ ಗೌರವಧನದಲ್ಲಿ ಕೆಲಸ ಮಾಡಿಕೊಂಡು ಕನಿಷ್ಠ ಮಟ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ರಾಜ್ಯಾದ್ಯಂತ ಸುಮಾರು 50,000 ಕ್ಕೂ ಹೆಚ್ಚಿನ ಅಂಗನವಾಡಿ ಕಾರ್ಯಕರ್ತೆಯರು ಸರಕಾರದ ಹಲವಾರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.ಹೀಗಾಗಿ ಕೇವಲ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಹಿಡಿದುಕೊಂಡು ಹೋರಾಟ ಮಾಡುವ ಹಾಗೂ ಅವುಗಳ ನಿವಾರಣೆಗೆ ಸರಕಾರದ ಮಟ್ಟದಲ್ಲಿ ಪ್ರಯತ್ನಿಸುವ ಉದ್ದೇಶದಿಂದ ಯೂನಿಯನ್‌ ಕೆಲಸ ಮಾಡಲಿದೆ ಎಂದರು.
ಇದರಿಂದ ಅಂಗನವಾಡಿ ಕಾರ್ಯಕರ್ತೆಯರ ನೈಜ ಸಮಸ್ಯೆ ನೆನೆಗುದಿಗೆ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಸರಕಾರ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮಧ್ಯೆ ಮೂರನೇ ಮಧ್ಯವರ್ತಿಯ ಪ್ರವೇಶವಾಗಬಾರದು. ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಗಬೇಕಾದ ಎಲ್ಲ ಸೌಲಭ್ಯಗಳು ಸರಕಾರದಿಂದ ನೇರವಾಗಿ ಫಲಾನುಭವಿಗಳಿಗೆ ಸಿಗಬೇಕು. ಇಷ್ಟು ವರ್ಷ ಕಾರ್ಯಕರ್ತೆಯರಿಗೆ ಆಗುತ್ತಿದ್ದ ಅನ್ಯಾಯ ಸರಿಪಡಿಸುವ ಸದುದ್ದೇಶದಿಂದ ರಾಜ್ಯಮಟ್ಟದ ಯೂನೀಯನ್‌ ರಚಿಸಲಾಗಿದೆ. ಈಗಾಗಲೇ ಎರಡು ಸಾವಿರಕ್ಕೂ ಹೆಚ್ಚಿನ ಸದಸ್ಯತ್ವ ನೊಂದಣಿಯಾಗಿದೆ.
ಯೂನೀಯನ್‌ನ ಜಿಲ್ಲಾಧ್ಯಕ್ಷೆ ಭಾಗೀರಥಿ ನಾಯ್ಕ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 2015 ರಿಂದ ಸಂಘಟನೆಯು ಕೇವಲ ಜಿಲ್ಲಾ ಮಟ್ಟದಲ್ಲಿ ಕೆಲಸ ಮಾಡಿಕೊಂಡು ಬರುತ್ತಿದೆ.ರಾಜ್ಯಮಟ್ಟದಲ್ಲೂ ಇದನ್ನು ವಿಸ್ತರಿಸುವ ಅವಶ್ಯಕತೆ ಇತ್ತು. ಹೀಗಾಗಿ ಅನೀತಾ ಎ.ಶೇಟ್‌ ಅವರ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಯೂನೀಯನ್‌ ನೊಂದಣಿ ಮಾಡಲಾಗಿದೆ.ಕೇವಲ ಅಂಗನವಾಡಿ ಕಾರ್ಯಕರ್ತೆಯರ ಹಿತ ಕಾಪಾಡುವುದೇ ಯೂನಿಯನ್‌ನ ಪ್ರಮುಖ ಗುರಿ ಎಂದರು.

loading...