ಅಕ್ರಮ ಕಡಿವಾಣಕ್ಕೆ ಫ್ಲೈಯಿಂಗ್‌ ವಿಚಕ್ಷಣ ದಳ ನೇಮಕ

0
12
loading...

ಕನ್ನಡಮ್ಮ ಸುದ್ದಿ-ಕೊಪ್ಪಳ : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಗಾ ವಹಿಸಲು ಹಾಗೂ ಕ್ಷಿಪ್ರ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 06 ತಂಡಗಳಂತೆ, ಐದು ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 30 ಫ್ಲೈಯಿಂಗ್‌ ಸ್ಕಾ÷್ವಡ್‌ (ವಿಚಕ್ಷಣ ದಳ) ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ತಿಳಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳ ಅಕ್ರಮ ಕಾರ್ಯಚಟುವಟಿಕೆಗಳಿಗೆ ಕಡಿವಾಣ ಹಾಕಲು ವಿಚಕ್ಷಣ ದಳ ನೇಮಕ ಮಾಡಲಾಗಿದೆ. ಮತದಾರರನ್ನು ಓಲೈಸುವ ಧಾವಂತದಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಎಸಗುವ ಅಕ್ರಮಗಳನ್ನು ತಡೆದು, ಅವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಈ ದಳ ಕ್ಷಿಪ್ರ ಕಾರ್ಯಾಚರಣೆ ನಡೆಸಲಿದೆ.
ಈ ವಿಚಕ್ಷಣ ದಳ ತಮ್ಮ ವ್ಯಾಪ್ತಿಯಲ್ಲಿನ ವಿವಿಧ ಸೆಕ್ಟರ್‌ ಅಧಿಕಾರಿಗಳ ತಂಡದೊಂದಿಗೆ ಸಮನ್ವಯ ಸಾಧಿಸಿ, ಸೂಕ್ತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಿದೆ. ಪ್ರತಿ ಫ್ಲೈಯಿಂಗ್‌ ಸ್ಕಾ÷್ವಡ್‌ ತಂಡದಲ್ಲಿ ಹಿರಿಯ ಅಧಿಕಾರಿಗಳು ತಂಡದ ಮುಖ್ಯಸ್ಥರಾಗಲಿದ್ದು. ಇವರ ಜೊತೆಗೆ ಒಬ್ಬರು ಪೊಲೀಸ್‌ ಇನ್ಸ್‌ಪೆಕ್ಟರ್‌, ಇಬ್ಬರು ಪೊಲೀಸ್‌ ಕಾನ್ಸಟೇಬಲ್‌ ಹಾಗೂ ಓರ್ವ ವಿಡಿಯೋಗ್ರಾಫರ್‌ ಸೇರಿದಂತೆ ಒಟ್ಟು ಐವರು ಕಾರ್ಯ ನಿರ್ವಹಿಸಲಿದ್ದಾರೆ.

loading...