ಅಕ್ರಮ ಮದ್ಯ ಸಾಗಾಟ ಐವರ ಬಂಧನ

0
23
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಖಾನಾಪೂರ ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್‍ದಿಂದ ಅಕ್ರಮವಾಗಿ ಗೋವಾದಿಂದ ಮದ್ಯ ಸಾಗಾಟ ಮಾಡುತ್ತಿದ್ದ ಐವರನ್ನು ಬಂಧಿಸಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿರುವ ಚುನಾವಣಾಧಿಕಾರಿಗಳು ಹಾಗೂ ಅಬಕಾರಿ ಇಲಾಖೆಯ ಪೊಲೀಸರು ಖಾನಾಪೂರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಕಣಕುಂಬಿ ಚೆಕ್ ಪೋಸ್ಟ್ ಬಳಿ ಅಕ್ರಮವಾಗಿ ಗೋವಾ ರಾಜ್ಯದಿಂದ ಕರ್ನಾಟಕಕ್ಕೆ ಸಾಗಿಸುತ್ತಿದ್ದ 65 ಲೀಟರ್ ಮದ್ಯವನ್ನು ಹಾಗೂ 36 ಲೀಟರ್ ಬೀಯರ್ ಸಹಿತ ಮೂರು ಬೈಕಗಳನ್ನು ವಶಪಡಿಸಿಕೊಂಡಿದ್ದಾರೆ.

loading...