ಅಪ್ಪಾಸಾಹೇಬ ಪಟ್ಟಣಶೆಟ್ಟಿಗೆ ಟಿಕೆಟ್‌ ನೀಡುವಂತೆ ಆಗ್ರಹ

0
28
loading...

ಕನ್ನಡಮ್ಮ ಸುದ್ದಿ-ವಿಜಯಪುರ: ವಿಧಾನ ಪರಿಷತ್‌ ಸದಸ್ಯ ಬಸನಗೌಡ ಪಾಟೀಲ ಯತ್ನಾಳರಿಗೆ ಟಿಕೆಟ್‌ ಘೋಷಣೆಯಾದ ನಂತರ ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಆಂತರಿಕ ಭಿನ್ನಮತ ತಾರಕ್ಕರೇದಿದೆ.
ಮಂಗಳವಾರ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರಿಗೆ ಬಿಜೆಪಿ ಟಿಕೆಟ್‌ ನೀಡುವಂತೆ ಆಗ್ರಹಿಸಿ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಬಣದ ಬಿಜೆಪಿ ಕಾರ್ಯಕರ್ತರು ಮಂಗಳವಾರ ಗಾಂಧಿರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ವಿವಿಧ ಪಾಲಿಕೆ ಸದಸ್ಯರು ಸಹ ಹೋರಾಟಕ್ಕೆ ಸಾಥ್‌ ನೀಡಿದರು.
ಗಾಂಧಿವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಸುಮಾರು 20 ನಿಮಿಷಗಳಿಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರಿಗೆ ಟಿಕೆಟ್‌ ನೀಡುವಂತೆ ಆಗ್ರಹಿಸಿದರು.
ವಿಧಾನ ಪರಿಷತ್‌ ಸದಸ್ಯ ಬಸನಗೌಡ ಪಾಟೀಲರಿಗೆ ಯಾವುದೇ ಕಾರಣಕ್ಕೂ ಟಿಕೆಟ್‌ ನೀಡಬೇಡಿ, ಯತ್ನಾಳರಿಗೆ ಧಿಕ್ಕಾರ ಎಂಬಿತ್ಯಾದಿ ಘೋಷಣೆ ಕೂಗುವ ಮೂಲಕ ಅಪ್ಪು ಬೆಂಬಲಿಗರು ತಮ್ಮ ಅಸಮಾಧಾನ ಹೊರಹಾಕಿದರು.
ಅಪ್ಪು ಪಟ್ಟಣಶೆಟ್ಟಿ ಅವರಿಗೆ ಟಿಕೆಟ್‌ ನೀಡಿದ್ದಲ್ಲಿ ಮಾತ್ರ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜಯ ಸಾಧಿಸುವುದು ನಿಶ್ಚಿತ. ಈ ಎಲ್ಲ ಅಂಶಗಳನ್ನು, ಅಪ್ಪು ಪಟ್ಟಣಶೆಟ್ಟಿ ಅವರ ಪಕ್ಷ ನಿಷ್ಠೆಯನ್ನು ಪಕ್ಷದ ವರಿಷ್ಠರು ಗಮನಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಪಾಲಿಕೆ ಸದಸ್ಯರಾದ ಅಪ್ಪು ಸಜ್ಜನ, ಆನಂದ ಧುಮಾಳೆ, ಅಲ್ತಾಪ್‌ ಇಟಗಿ, ಪ್ರಕಾಶ ಮಿರ್ಜಿ, ರಾಹುಲ್‌ ಜಾಧವ, ಶಂಕರ ಕುಂಬಾರ, ರಾಜು ಹುನ್ನೂರ, ಭರತ ಕೋಳಿ ಸೇರಿದಂತೆ ಹಲವಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಅಪ್ಪು ಪಟ್ಟಣಶೆಟ್ಟಿ ಅವರಿಗೆ ಟಿಕೇಟ್‌ ನೀಡುವಂತೆ ಆಗ್ರಹಿಸಿದರು.

loading...