ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಬಿಜೆಪಿಯಲ್ಲಿ ಅಸಮಾಧಾನವಿಲ್ಲ: ಕೆ.ಜಿ.ನಾಯ್ಕ

0
26
loading...

ಕನ್ನಡಮ್ಮ ಸುದ್ದಿ-ಕಾರವಾರ: ಉತ್ತರಕನ್ನಡ ಬಿಜೆಪಿಯಲ್ಲಿ ಯಾವುದೇ ಅಸಮಾಧಾನ, ಅತೃಪ್ತಿ ಇಲ್ಲ. ಎಲ್ಲಾ ಟಿಕೇಟ್ ಆಕಾಂಕ್ಷಿಗಳಾಗಿದ್ದವರೂ ಸಹ ಕಾರವಾರ ಕ್ಷೇತ್ರದ ಘೋಷಿತ ಅಭ್ಯರ್ಥಿ ರೂಪಾಲಿ ನಾಯ್ಕ ಪರ ಕೆಲಸ ಮಾಡಲು ಒಪ್ಪಿದ್ದಾರೆಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೆ.ಜಿ.ನಾಯ್ಕ ಪಕ್ಷ ಅಶಿಸ್ತನ್ನು ಎಂದಿಗೂ ಸಹಿಸುವುದಿಲ್ಲ.

ಯಡಿಯೂರಪ್ಪ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ಏ.16ಕ್ಕೆ ಕಾರವಾರಕ್ಕೆ ಆಗಮಿಸಲಿದ್ದು, ಮಹಿಳಾ ಮೀನುಗಾರರೊಂದಿಗೆ ಸಂವಾದ ನಡೆಸಲಿದ್ದಾರೆ. ಮಹಿಳಾ ಮೀನುಗಾರರು ಎದುರಿಸುತ್ತಿರುವ ಸಮಸ್ಯೆ, ಅವರ ಬೇಡಿಕೆಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಕೆ.ಜಿ.ನಾಯ್ಕ ಹೇಳಿದರು.
ಕಾರವಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಮಾತನಾಡಿ ತಾಲೂಕು ಅಭಿವೃದ್ಧಿ ವಿಷಯದಲ್ಲಿ ತೀರಾ ಹಿಂದಿದೆ. ನಿರುದ್ಯೋಗಿಗಳ ಸಂಖ್ಯೆ ಹೆಚ್ಚಿದೆ. ಯುವಕರು ಸಣ್ಣಪುಟ್ಟ ಉದ್ಯೋಗಕ್ಕಾಗಿ ಪಕ್ಕದ ಗೋವಾ ರಾಜ್ಯ ಅವಲಂಭಿಸಿದ್ದಾರೆ. ಶಾಸಕಿಯಾಗಿ ಆಯ್ಕೆಯಾದರೆ ಕ್ಷೇತ್ರದಲ್ಲಿ ಪರಿಸರ ಪೂರಕ ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡಿ ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಓದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ ಕ್ರಮಕೈಗೊಳ್ಳುತ್ತೇನೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಧುರೀಣರಾದ ರಾಜೇಶ ನಾಯಕ, ಭಾಸ್ಕರ ನಾರ್ವೇಕರ್, ಗಣಪತಿ ಉಳ್ವೇಕರ್ ಉಪಸ್ಥಿತರಿದ್ದರು.

loading...