ಇನ್ನೆರಡು ದಿನಗಳಲ್ಲಿ ಅಭ್ಯರ್ಥಿ ಘೋಷಣೆ: ಬಿಎಸ್‌ವೈ

0
28
loading...

ಗಂಗಾವತಿ: ಈ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡಲಾಗುವದು ಎಂದು ಬಿಜೆಪಿ ರಾಜ್ಯ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.
ಭತ್ತದ ಬೆಳೆಗಾರರೊಂದಿಗೆ ಸಂವಾದ ಮಾಡಲು ಮಂಗಳವಾರ ಆಗಮಿಸಿದ್ದ ಅವರು ಉದ್ಯಮಿ ಸಿಂಗನಾಳ ಪಂಪಾಪತಿಯವರ ನಿವಾಸದಲ್ಲಿ ಭೋಜನಕೂಟದಲ್ಲಿ ಪಾಲ್ಗೊಂಡು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಅವರು ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವದು. ತಮ್ಮ ಪಕ್ಷದ ಸಮೀಕ್ಷೆಯನ್ನು ಆಧರಿಸಿ ಟಿಕೇಟು ನೀಡಲಾಗುವದು. ಸ್ಪರ್ದಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಅವರ ಅಭಿಪ್ರಾಯಗಳನ್ನು ಪಡೆದು ಗೆಲ್ಲುವ ಕುದುರೆಗೆ ಪಕ್ಷದ ಟಿಕೇಟು ನೀಡಲಾಗುವದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ, ಸಂಭಾವನೀಯ ಅಭ್ಯರ್ಥಿ ಪರಣ್ಣ ಮುನವಳ್ಳಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸಿಂಗನಾಳ ವಿರುಪಾಕ್ಷಪ್ಪ, ಮಾಜಿ ಸಂಸದ ಕೆ.ವಿರುಪಾಕ್ಷಪ್ಪ, ಮಾಜಿ ಸಚಿವ ಸಾಲೋಣಿ ನಾಗಪ್ಪ ಪಾಲ್ಗೊಂಡಿದ್ದರು.

loading...