ಅಮಿತ್ ಶಾ ಪ್ರವಾಸ ಮುಂದೂಡಿಕೆ: ಕಡಾಡಿ

0
17
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಇಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಳಗಾವಿಗೆ ಬರಬೇಕಾಗಿತ್ತು. ಕಾರಣಾಂತರಗಳಿಂದ ಬಂದಿಲ್ಲ. ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳು ರದ್ದಾಗಿವೆ. ಇದೇ 12 ಮತ್ತು 13 ರಂದು ಯಥಾವತ್ತಾಗಿ ಅಮಿತ್ ಶಾ ಸಮ್ಮುಖದಲ್ಲಿ ಕಾರ್ಯಕ್ರಮಗಳು ನಡಿಯುವ ಸಂಭವವಿದೆ ಎಂದು ಬಿಜೆಪಿ ಮುಖಂಡ ಈರಣ್ಣಾ ಕಡಾಡಿ ಹೇಳಿದರು.
ನಗರದಲ್ಲಿರುವ ಗ್ರಾಮೀಣ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅಮಿತ್ ಶಾ ರಾಜ್ಯಸಭಾ ಸದಸ್ಯರಾಗಿರುವುದರಿಂದ ಸಭೆಯಲ್ಲಿ ಭಾಗವಹಿಸಬೇಕಾಗಿತ್ತು ಆದರಿಂದ ಅಮಿತ್ ಶಾ ಪ್ರವಾಸವನ್ನು ರದ್ದು ಮಾಡಿದ್ದಾರೆ ಎಂದರು.
ಹಾವೇರಿ ಜಿಲ್ಲೆಯ ಕಾಗಿನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಹಿಂದುಳಿದ ಸಮಾವೇಶದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಅಮಿತ್ ಶಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ ಸಮಾವೇಶಕ್ಕೆ ಆಗಮಿಸಲಿದ್ದಾರೆ. ಅಮಿತ್ ಶಾ ಹುಬ್ಬಳ್ಳಿಯಿಂದ ನೇರವಾಗಿ ಕಾಗಿನೆಲೆ ಸಮಾವೇಶಕ್ಕೆ ಅಮಿತ್ ಶಾ ತೆರಳಲಿದ್ದಾರೆ ಎಂದು ಈರಣ್ಣಾ ಕಡಾಡಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಶಿಕಾಂತ ನಾಯಕ ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರ ವಾಮನಾರ್ಚಾ, ಬಿಜೆಪಿ ಮುಖಂಡ ಬಸವರಾಜ ರೊಟ್ಟಿ ಮತ್ತಿತರರು ಉಪಸ್ಥಿತರಿದ್ದರು.

loading...