ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಅಮಿತ್ ಷಾ, ಫೈನಲ್ ಆಗಲಿದೆ ಅಭ್ಯರ್ಥಿಗಳ ಪಟ್ಟಿ

0
29
loading...

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇದೇ 8 ಮತ್ತು 9ರಂದು ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಭಾನುವಾರ ಕಾಂಗ್ರೆಸ್‍ನ ಜನಾರ್ಶೀವಾದ ಯಾತ್ರೆಯ ಸಮಾರೋಪ ಸಮಾರಂಭ ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತ ಬಿಜೆಪಿಯ ಚಾಣಾಕ್ಯ ಎಂದೇ ಕರೆಯಲ್ಪಡುವ ಅಮಿತ್ ಷಾ ಎರಡು ದಿನಗಳ ಕಾಲ ನಗರದಲ್ಲಿ ಠಿಕಾಣಿ ಹೂಡುತ್ತಿರುವುದರಿಂದ ಬಿಜೆಪಿ ವಲಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ.

ಮೂಲಗಳ ಪ್ರಕಾರ ಅಮಿತ್ ಷಾ ಎರಡು ದಿನಗಳಲ್ಲಿ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ಜಿಲ್ಲಾ ಅಧ್ಯಕ್ಷರು, ಮಂಡಲ ಪ್ರಮುಖರು ಹಾಗೂ ಪಕ್ಷದ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ.  ಏ.10ರ ನಂತರ ಯಾವುದೇ ಸಂದರ್ಭದಲ್ಲೂ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಷಾ ಪಕ್ಷದ ಪ್ರಮುಖರೊಂದಿಗೆ ಚರ್ಚೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಗೆ ಅಂತಿಮ ಸ್ಪರ್ಶ ನೀಡಲಿದ್ದಾರೆ.

loading...