ಏ.10ರಂದುಅಭ್ಯರ್ಥಿಗಳ ಪಟ್ಟಿ ಬಿಡುಗಡೆ

0
41
loading...

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಗಣನೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಏ.10ರಂದು ಮೊದಲ 140 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ವಾರಾಂತ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಮುರಳೀಧರರಾವ್, ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ಸಹ ಉಸ್ತುವಾರಿ ಪಿಯೂಶ್‍ಗೋಯಲ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವರಾದ ಅನಂತ್‍ಕುಮಾರ್, ಡಿ.ವಿ.ಸದಾನಂದಗೌಡ, ರಮೇಶ್ ಜಿಗಜಿಣಗಿ, ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಅಶ್ವತ್ಥ್, ಪ್ರಹ್ಲಾದ್‍ಜೋಷಿ ಮತ್ತಿತರರು ದೆಹಲಿಗೆ ತೆರಳುವರು.

ಹಾಲಿ ಶಾಸಕರೂ ಸೇರಿದಂತೆ ಅನ್ಯ ಪಕ್ಷಗಳಿಂದ ಬಂದಿರುವ ಪ್ರಮುಖರಿಗೆ ಮೊದಲ ಪಟ್ಟಿಯಲ್ಲೇ ಟಿಕೆಟ್ ಘೋಷಣೆಯಾಗಲಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 140 ಅಭ್ಯರ್ಥಿಗಳ ಹೆಸರನ್ನು ಕೇಂದ್ರ ವರಿಷ್ಠರು ಬಿಡುಗಡೆ ಮಾಡಲಿದ್ದಾರೆ. ಈಗಾಗಲೇ ಪಟ್ಟಿ ದೆಹಲಿಯಲ್ಲಿರುವ ಪಕ್ಷದ ಚುನಾವಣಾ ಸಮಿತಿಗೆ ತಲುಪಿದೆ. ಹಾಲಿ ಶಾಸಕರನ್ನು ಹೊರತುಪಡಿಸಿ, ಉಳಿದ ವಿಧಾನಸಭಾ ಕ್ಷೇತ್ರಗಳಿಗೆ 2ರಿಂದ 3ರ ಹೆಸರನ್ನು ರಾಜ್ಯ ಘಟಕ ಶಿಫಾರಸು ಮಾಡಿದೆ.

loading...