ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ವಿ. ದೇಶಪಾಂಡೆ ನಾಮಪತ್ರ ಸಲ್ಲಿಕೆ

0
10
loading...

ಕನ್ನಡಮ್ಮ ಸುದ್ದಿ-ಹಳಿಯಾಳ: ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿರಿಯರಾದ ಆರ್.ವಿ. ದೇಶಪಾಂಡೆ ಯವರು ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಸಿದರು. ಪತ್ನಿ ರಾಧಾಬಾಯಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಹಳಿಯಾಳದ ಸುಭಾಸ ಕೋರ್ವೆಕರ, ದಾಂಡೇಲಿಯ ಸೈಯದ ತಂಗಳ ಇವರುಗಳು ನಾಮಪತ್ರ ಸಲ್ಲಿಸುವಾಗ ಜೊತೆಗಿದ್ದರು.
ನಾಮಪತ್ರ ಸಲ್ಲಿಕೆಯ ನಂತರ ಜಮಾಯಿಸಿದ್ದ ಸಹಸ್ರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ವಂದಿಸಿದ ಆರ್.ವಿ. ದೇಶಪಾಂಡೆ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡರು. ಬ್ಲಾಕ್ ಕಾಂಗ್ರೆಸ್ ಎದುರು ಮೆರವಣಿಗೆಯು ಸಮಾವೇಶಗೊಂಡಿತು.

ಜಮಾಯಿಸಿದ್ದ ಅಭಿಮಾನಿಗಳನ್ನುದ್ದೇಶಿಸಿ ಆರ್.ವಿ. ದೇಶಪಾಂಡೆ ಮಾತನಾಡಿದರು. ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಗಳು, ಸಾಮಾಜಿಕ ನ್ಯಾಯ, ಅಭಿವೃದ್ಧಿ ಇವುಗಳಿಂದ ರಾಜ್ಯದ ಜನತೆಗೆ ಉಪಯೋಗವಾಗಿದೆ. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ:- ಹಳಿಯಾಳ ಕ್ಷೇತ್ರದಲ್ಲಿ ಅಪಾರ ಅಭಿವೃದ್ಧಿ ಕಾರ್ಯಗಳು ಆಗಿವೆ. ಹೀಗಾಗಿ ವಿರೋಧ ಪಕ್ಷದವರಿಗೆ ಅಭಿವೃದ್ಧಿ ವಿಷಯದ ಬಗ್ಗೆ ಮಾತನಾಡಲು ವಿಷಯವಿಲ್ಲದಂತಾಗಿದೆ. ಹಳಿಯಾಳ ತಾಲೂಕಿನಲ್ಲಿ ಕಾಳಿನದಿ ನೀರಾವರಿ ಯೋಜನೆ, ಗ್ರಾಮೀಣ ಭಾಗದವರಿಗೂ ಕಾಳಿನದಿಯಿಂದ ನೀರು ಪೂರೈಕೆ ಮಾಡುವುದು, ದಾಂಡೇಲಿಯನ್ನು ಹೊಸ ತಾಲೂಕನ್ನಾಗಿಸುವದು, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನಲ್ಲಿ ಪ್ರವಾಸೋದ್ಯಮಕ್ಕೆ ಪೂರಕ ಯೋಜನೆಗಳನ್ನು ರೂಪಿಸಲಾಗಿದೆ. ತನ್ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯ ಕಾರ್ಯ ಮಾಡಲಾಗಿದೆ ಎಂದು ಹೇಳಿದರು.

 

loading...