ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್.ವಿ. ದೇಶಪಾಂಡೆ ನಾಮಪತ್ರ ಸಲ್ಲಿಕೆ

0
17
loading...

ಕನ್ನಡಮ್ಮ ಸುದ್ದಿ-ಹಳಿಯಾಳ: ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿರಿಯರಾದ ಆರ್.ವಿ. ದೇಶಪಾಂಡೆ ಯವರು ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಸಿದರು. ಪತ್ನಿ ರಾಧಾಬಾಯಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಹಳಿಯಾಳದ ಸುಭಾಸ ಕೋರ್ವೆಕರ, ದಾಂಡೇಲಿಯ ಸೈಯದ ತಂಗಳ ಇವರುಗಳು ನಾಮಪತ್ರ ಸಲ್ಲಿಸುವಾಗ ಜೊತೆಗಿದ್ದರು.
ನಾಮಪತ್ರ ಸಲ್ಲಿಕೆಯ ನಂತರ ಜಮಾಯಿಸಿದ್ದ ಸಹಸ್ರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ವಂದಿಸಿದ ಆರ್.ವಿ. ದೇಶಪಾಂಡೆ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡರು. ಬ್ಲಾಕ್ ಕಾಂಗ್ರೆಸ್ ಎದುರು ಮೆರವಣಿಗೆಯು ಸಮಾವೇಶಗೊಂಡಿತು.

ಜಮಾಯಿಸಿದ್ದ ಅಭಿಮಾನಿಗಳನ್ನುದ್ದೇಶಿಸಿ ಆರ್.ವಿ. ದೇಶಪಾಂಡೆ ಮಾತನಾಡಿದರು. ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಗಳು, ಸಾಮಾಜಿಕ ನ್ಯಾಯ, ಅಭಿವೃದ್ಧಿ ಇವುಗಳಿಂದ ರಾಜ್ಯದ ಜನತೆಗೆ ಉಪಯೋಗವಾಗಿದೆ. ಕಾಂಗ್ರೆಸ್ ಪಕ್ಷವು ಸರ್ವ ಜನರ ಏಳಿಗೆಯನ್ನು ಬಯಸುವ ಪಕ್ಷವಾಗಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಜೊತೆಗೆ ಶಾಂತಿ-ಸುವ್ಯವಸ್ಥೆ ಕಾಪಾಡುತ್ತಾ ಜನರಲ್ಲಿ ಪರಸ್ಪರ ಸೌಹಾರ್ದಯುತ ವಾತಾವರಣ ಇರುವಂತೆ ನೋಡಿಕೊಂಡಿದೆ. ಆದರೆ ಭಾಜಪದವರು ಮಾತ್ರ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಿ ಪರಸ್ಪರ ಅಪನಂಬಿಕೆ ಹುಟ್ಟಿಸಿ ತಮ್ಮ ಪರ ವಾತಾವರಣ ನಿರ್ಮಿಸಿಕೊಳ್ಳಲು ಪ್ರಯತ್ನಿಸಿದರು. ಆದರೆ ಅದು ಎಂದಿಗೂ ಯಶಸ್ವಿಯಾಗುವುದಿಲ್ಲ. ಜನತೆ ಅಭಿವೃದ್ಧಿ ಚಿಂತನೆಗಳಿಗೆ ಬೆಂಬಲ ನೀಡುತ್ತಾರೆ ಎಂದರು.
ಉಪಸ್ಥಿತಿ:- ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣಾ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಹಳಿಯಾಳದ ಸುಭಾಸ ಕೋರ್ವೆಕರ, ದಾಂಡೇಲಿಯ ಸೈಯದ ತಂಗಳ, ಜೋಯಿಡಾದ ಸದಾನಂದ ದಬಗಾರ, ದೇಶಪಾಂಡೆ ಪುತ್ರರಾದ ಪ್ರಶಾಂತ ಹಾಗೂ ಪ್ರಸಾದ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಸಂತೋಷ ರೇಣಕೆ, ಸದಸ್ಯರಾದ ಕೃಷ್ಣಾ ಪಾಟೀಲ, ಮಹೇಶ್ರೀ ಮಿಶ್ಯಾಳೆ, ಲಕ್ಷ್ಮೀ ಕೋರ್ವೆಕರ, ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ, ಪುರಸಭೆ ಅಧ್ಯಕ್ಷ ಶಂಕರ ಬೆಳಗಾಂವಕರ ಹಾಗೂ ಸದಸ್ಯರು, ತಾಲೂಕ ಪಂಚಾಯತ ಅಧ್ಯಕ್ಷೆ ರೀಟಾ ಸಿದ್ಧಿ ಹಾಗೂ ಸದಸ್ಯರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಾಲಾ ಬೃಗಾಂಜಾ ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.

loading...