ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಲೆಕ್ಕಕ್ಕೆ ಇಲ್ಲ: ಶ್ರೀನಾಥ

0
17
loading...

ಗಂಗಾವತಿ: ಜೆಡಿಎಸ್ ಅಭ್ಯರ್ಥಿ ಕರಿಯಣ್ಣ ಸಂಗಟಿ ಮಂಗಳವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಸಿಬಿಎಸ್ ವೃತ್ತದಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು.

ಗೆಲುವು ನಮ್ಮದು: ನಾಮಪತ್ರ ಸಲ್ಲಿಸಿದ ನಂತರ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಆರ್.ಶ್ರೀನಾಥ ಮಾಧ್ಯಮದವರೊಂದಿಗೆ ಮಾತನಾಡಿ ತಮ್ಮ ಪ್ರತಿ ಸ್ಪರ್ಧಿ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿಯವರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಲೆಕ್ಕಕ್ಕೆ ಇಲ್ಲ ಎಂದು ತಿಳಿಸಿದರು.
ಇಕ್ಬಾಲ್ ಅನ್ಸಾರಿಯವರು ತಮ್ಮ ಪಕ್ಷದ ಅಭ್ಯರ್ಥಿ ಕರಿಯಣ್ಣ ಸಂಗಟಿ ಕುರಿತು ಪ್ರಚಾರದ ಸಂದರ್ಭದಲ್ಲಿ ಹಗುರವಾಗಿ ಮಾತನಾಡುತ್ತಿದ್ದಾರೆ. ಇದನ್ನು ಅನ್ಸಾರಿ ನಿಲ್ಲಿಸಬೇಕು ಎಂದು ತಿಳಿಸಿದರು. ಕರಿಯಣ್ಣ ಎರಡು ಸಾರೆ ಜಿಲ್ಲಾ ಪಂಚಾಯತ ಸದಸ್ಯರಾಗಿ ಒಂದು ಅವಧಿಯಲ್ಲಿ ವಿಧಾನಪರಿಷತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸೋಲಿನ ಭೀತಿಯಲ್ಲಿರುವ ಅನ್ಸಾರಿ ತನ್ನ ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು ಎಂಬ ಎಚ್ಚರಿಕೆ ನೀಡಿದರು.

ಚುನಾವಣೆಯಲ್ಲಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ ತಮ್ಮ ಪಕ್ಷ ಗೆಲುವು ಸಾಧಿಸಲಿದೆ ಎಂದು ಹೇಳಿದರು. ಮುಖಂಡರಾದ ಪಾಡಗುತ್ತಿ ಅಕ್ತರಸಾಬ, ಜೆಡಿಎಸ್ ಬ್ಲಾಕ್ ಅಧ್ಯಕ್ಷ ಶೇಖನಬಿ, ಮೋಸೀನ್ ಚಾವೂಸ್, ರಾಘವೇಂದ್ರ ಪಾಲ್ಗೊಂಡಿದ್ದರು.

loading...