ಕಾಂಗ್ರೆಸ್ ಅಭ್ಯರ್ಥಿ ಶಿವರಾಮ ಹೆಬ್ಬಾರ ನಾಮಪತ್ರ ಸಲ್ಲಿಕೆ

0
31
loading...

ಕನ್ನಡಮ್ಮ ಸುದ್ದಿ-ಯಲ್ಲಾಪುರ: ಶಾಸಕ ಶಿವರಾಮ ಹೆಬ್ಬಾರ ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿ ಮಹಾಂತೇಶಪ್ಪ ಎಂ ಅವರಿಗೆ ಗುರುವಾರ ನಾಮಪತ್ರ ಸಲ್ಲಿಸಿದರು.
ಈ ವೇಳೆ ಪತ್ನಿ ವನಜಾಕ್ಷಿ ಹೆಬ್ಬಾರ, ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಗಾಂವ್ಕರ ,ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ವಿಜಯ ಮಿರಾಶಿ, ಕೆ.ಪಿ.ಸಿ.ಸಿ ಸದಸ್ಯ ಸಿ.ಎಫ್ ನಾಯ್ಕ ಇದ್ದರು.

ಗುರುವಾರ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಸುವ ಮೊದಲು, ಪಟ್ಟಣದ ವೈ.ಟಿ.ಎಸ್.ಎಸ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗಾಗಿ ನನ್ನ ಶಾಸಕತ್ವದ 5 ವರ್ಷಗಳ ಅವಧಿಗಳಲ್ಲಿ ಸುಮಾರು 700 ಕೋ. ರೂಗಳಷ್ಟು ಅಧಿಕ ಮೊತ್ತದ ಅನುದಾನವನ್ನು ತರಲು ಯಶಸ್ವಿಯಾಗಿದ್ದೇನೆ ಎಂದರು.
ಈ ಹಿನ್ನೆಲೆಯಲ್ಲಿ ಜವಾಬ್ದಾರಿಯನ್ನು ಹೊತ್ತ ನಾನು ಹಿಂದಿನ ಯಾವ ಜನಪ್ರತಿನಿಧಿಗಳೂ ತರದಷ್ಟು ಅಭಿವೃದ್ಧಿ ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದೇನೆ. ಕಾರಣ ಬಾರಿಯೂ ಮತದಾರರು 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಲು ಕಾರ್ಯಕರ್ತರು ಅಹರ್ನಿಶಿ ಶ್ರಮಿಸಬೇಕು ಎಂದರು.

ಕೆ.ಪಿ.ಸಿ. ಸದಸ್ಯ ಸಿ.ಎಫ್ ನಾಯ್ಕ, ಪಕ್ಷದ ಮುಖಂಡರಾದ ಆರ್.ಎನ್.ಹೆಗಡೆ ಗೋರ್ಸಗದ್ದೆ, ಎಚ್.ಎಂ. ನಾಯ್ಕ ಮಾತನಾಡಿದರು. ಮುಂಡಗೋಡ ಬ್ಲಾಕ್ ಅಧ್ಯಕ್ಷ ರವಿ ಗೌಡ ಪಾಟೀಲ್, ಪ್ರಮುಖರಾದ ವಿಜಯ ಮಿರಾಶಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಭವ್ಯಾ ಶೆಟ್ಟಿ, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಶಿರೀಷ ಪ್ರಭು, ಹೆಬ್ಬಾರರ ಪತ್ನಿ ವನಜಾಕ್ಷಿ ಹೆಬ್ಬಾರ, ಪುತ್ರ ವಿವೇಕ ಹೆಬ್ಬಾರ, ಪುತ್ರಿ ಶ್ರುತಿ ರಾವ್, ಸೊಸೆ ದಿವ್ಯಾ ಹೆಬ್ಬಾರ ಮತ್ತಿತರರು ಉಪಸ್ಥಿತರಿದ್ದರು.

 

loading...