ಕಾಂಗ್ರೆಸ್ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ

0
33
loading...

ಖಾನಾಪುರ: ಪಕ್ಷದ ಮುಖಂಡರ ವರ್ತನೆಗೆ ಬೇಸತ್ತ ತಾಲೂಕಿನ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುರುವಾರ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದರು.
ಕಳೆದ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದ ಡಾ.ಅಂಜಲಿ ನಿಂಬಾಳಕರ ಅವರಿಗೆ ಈ ಸಲದ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದ್ದನ್ನು ಖಂಡಿಸಿ ಈಗಾಗಲೇ ಪಕ್ಷದ ವರಿಷ್ಠರಿಗೆ ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಈಗಾಗಲೇ ತಾಲೂಕಿನ ಹಳೆಯ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಹಲವು ಬಾರಿ ಪಕ್ಷದ ಕಾರ್ಯಕರ್ತರ ಸಭೆಗಳನ್ನು ನಡೆಸಿ ಪ್ರತಿಯೊಬ್ಬ ಮುಖಂಡ ಮತ್ತು ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದ್ದು, ಎಲ್ಲರ ಅಭಿಪ್ರಾಯದಂತೆ ಗುರುವಾರ ಪಕ್ಷದ ವರಿಷ್ಠರಿಗೆ ಸಾಮೂಹಿಕವಾಗಿ ರಾಜೀನಾಮೆಯನ್ನು ಸಲ್ಲಿಸಲಾಗಿದೆ ಎಂದು ಕೆಪಿಸಿಸಿ ಸದಸ್ಯ ರಫೀಕ ಖಾನಾಪುರಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡ ನಿರೂಪಾದಿ ಕಾಂಬಳೆ, ಕೆಡಿಪಿ ಸದಸ್ಯ ಪ್ರಕಾಶ ಪಾಟೀಲ, ಪಕ್ಷದ ಪ್ರಧಾನ ಕಾರ್ಯದರ್ಶಿ ಎಂ.ಎ ಸಾಹುಕಾರ, ಶ್ರೀಕಾಂತ ಬಲ್ಲಾಳ, ನಿರೂಪಾದಿ ಕಾಂಬಳೆ, ಪ್ರಕಾಶ ಬೈಲೂರಕರ, ಯಾಸೀನ ತೋಲಗಿ, ವಿಜಯ ಬಿರ್ಜೆ, ನಾಮದೇವ ಬೀಡಿಕರ, ಸಚಿನ ಗಸ್ತೆ, ನಸ್ರೀನ ಕಿತ್ತೂರ, ಗೀತಾ ಪೂಜಾರ, ಮುನಾಫ ಸನದಿ, ಪ್ರಕಾಶ ಮಾದರ, ಎನ್.ಸಿ ತಳವಾರ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

loading...