ಕಾಂಗ್ರೇಸ್‌ನ ದುರಾಡಳಿತವನ್ನು ಕೊನೆಗಾಣಿಸಲು ಬಿಜೆಪಿಗೆ ಮತ ನೀಡಿ

0
12
loading...

ಗದಗ: ಗೂಂಡಾಗಿರಿ, ಭ್ರಷ್ಟಾಚಾರ, ಸರ್ವಾಧಿಕಾರಿ ಧೋರಣೆಯಿಂದ ಆಡಳಿತ ನಡೆಸುವ ಮೂಲಕ ಜನರಿಗೆ ಕನಿಷ್ಠ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ನೀಡದ ಸಚಿವ ಎಚ್‌.ಕೆ.ಪಾಟೀಲರನ್ನು ಸೋಲಿಸಿ ಈ ಬಾರಿ ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಅವರಿಗೆ ಮತ ನೀಡಿ ಆಯ್ಕೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕರೆ ನೀಡಿದರು.
ನಗರದ ಸ್ವಾಮಿ ವಿವೇಕಾನಂದ ಸಭಾ ಭವನದಲ್ಲಿ ಶ£ವಾರ ಏರ್ಪಡಿಸಿದ್ದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಏಪ್ರೀಲ್‌ 30 ರಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದು, ಅದರಲ್ಲಿ ಕೃಷಿ ವಲಯಕ್ಕೆ ಆಧ್ಯತೆ ವಿವಿಧ ಪಿಂಚಣಿ ಯೋಜನೆಗಳ ಮೊತ್ತ ಹೆಚ್ಚಳ, ಭಾಗ್ಯಲಕ್ಷ್ಮೀ ಬಾಂಡ್‌, ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಸೈಕಲ್‌ವಿತರಣೆ, ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಘೋಷಿಸಲಾಗುವುದು ಎಂದು ಬಿ.ಎಸ್‌.ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ನೇಕಾರರ ಸಂಪೂರ್ಣ ಸಾಲವನ್ನು ಮನ್ನಾ ಮಾಡಲಾಗುವುದು. ರೈತರಿಗೆ £ೕಡುವ ಸಾಲದ ಮಾದರಿಯಂತೆ ಬಡ್ಡಿರಹಿತ ಸಾಲವನ್ನು ನೇಕಾರರಿಗೂ ನೀಡುವ ಉದ್ಧೇಶ ಹೊಂದಲಾಗಿದೆ ಎಂದರು.
ಗದಗ ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ಮಾತನಾಡಿ, ಕಾಂಗ್ರೆಸ್‌ನ ದುರಾಡಳಿತ, ಭ್ರಷ್ಟ, ದಬ್ಬಾಳಿಕೆ ನಡೆಸುತ್ತಿರುವ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಲು ಈ ಬಾರಿ ತಮ್ಮ ಗುರುತಾದ ಕಮಲಕ್ಕೆ ಮತ ನೀಡಿ ಬಿ.ಎಸ್‌.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಬೇಕು ಎಂದರು.
ಯಡಿಯೂರಪ್ಪನವರು ಮುಖ್ಯಮಂತ್ರಿಗಳಿದ್ದ ಅವಧಿಯಲ್ಲಿ ಹಣ ಬಿಡುಗಡೆ ಮಾಡಿದ ಯೋಜನೆಗಳಾದ 24/7 ಕುಡಿಯುವ ನೀರು, ಭೀಷ್ಮ ಕೆರೆ ಅಭಿವೃದ್ಧಿ, ರಾಜ್ಯ ಹೆದ್ದಾರಿ ನಿರ್ಮಾಣ, ಮೆಡಿಕಲ್‌ ಕಾಲೇಜ್‌, ಪಶು ವೈದ್ಯಕೀಯ ಕಾಲೇಜ್‌ ಸ್ಥಾಪನೆ ಇವು ಬಿಜೆಪಿ ಸರಕಾರದ ಕಾರ್ಯಕ್ರಮಗಳು. ಇವುಗಳನ್ನೇ ಕಾಂಗ್ರೆಸ್‌ನವರು ತಮ್ಮವೆಂದು ಬಿಂಬಿಸಿದ್ದಾರೆ. ಸರಕಾರದ ಹಣದಲ್ಲಿ ಸಮಾವೇಶಗಳನ್ನು ಮಾಡುತ್ತ ಪುಕ್ಕಟೆ ಪ್ರಚಾರ ಪಡೆದಿದ್ದಾರೆ ಎಂದು ಆರೋಪಿಸಿದರು.
ಗದಗ ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ, ವಿವಿಧ ಕಾರ್ಖಾನೆಗಳನ್ನು ಸ್ಥಾಪಿಸುವ ಮೂಲಕ ಯುವ ಜನರಿಗೆ ಉದ್ಯೋಗ ಸೃಷ್ಠಿ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ಅನಿಲ ಮೆಣಸಿನಕಾಯಿ ಹೇಳಿದರು.
ಕಾಂಗ್ರೆಸ್‌ನವರು ವೀರಶೈವ ಲಿಂಗಾಯತ ಧರ್ಮವನ್ನೇ ಒಡೆದು ಜಾತಿಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಎಲ್ಲ ವೀರಶೈವ-ಲಿಂಗಾಯತರು ಒಗ್ಗಟಾಗಿ ಚುನಾವಣೆಯನ್ನು ಎದುರಿಸುತ್ತೇವೆ. ಈ ಬಾರಿ ಹೆಚ್ಚು ಮತಗಳ ಅಂತರದಿಂದ ತಮ್ಮನ್ನು ಗೆಲ್ಲಿಸಿ ಸೇವೆಗೆ ಅವಕಾಶ ನೀಡಬೇಕೆಂದರು.
ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪರ ಯೋಜನೆಗಳು ರಾಜ್ಯದಲ್ಲೂ ಅನುಷ್ಠಾಣಗೊಳ್ಳಬೇಕಾದರೆ ರಾಜ್ಯದಲ್ಲಿ ಬಿಜೆಪಿ ಸರಕಾರವಿರುವುದು ಅಗತ್ಯವಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಒಂದು ಲಕ್ಷ ಕೋಟಿ ರು. ಕೃಷಿವಲಯಕ್ಕೆ ನೀಡುವ ಮೂಲಕ ಆಧ್ಯತೆ ನೀಡಿದೆ. ಹಾವೇರಿ ಮತಕ್ಷೇತ್ರದಲ್ಲಿಯೇ ಹಿರೆಕೆರೂರ ಹಾಗೂ ಗದಗ ಮತಕ್ಷೇತ್ರಗಳು ಬಿಜೆಪಿ ಪರವಾಗಿವೆ ಎಂದರು.
ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಮಾತನಾಡಿ, ರಾಜ್ಯ ವಿಧಾನಸಭೆ ಚುನಾವಣೆ ಮುಂಬರುವ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಸರಕಾರ ಜನರ ವಿಚಾರ ಧಾರೆಗಳಿಗೆ, ಜನರ ಭಾವನೆಗಳಿಗೆ ಸ್ಪಂದಿಸುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದ ರೈಲ್ವೆ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿಗಳ £ರ್ಮಾಣ ಕಾರ್ಯ ಚುರುಕಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗುವರು ಎಂದರು. ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ವಿ.ಪ ಸದಸ್ಯ ಎಸ್‌.ವಿ.ಸಂಕನೂರ, ಮೋಹನ ಲಿಂಬಿಕಾಯಿ ಮುಂತಾದವರಿದ್ದರು.

loading...