ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲಾಗುವುದು: ಶಾಸಕಿ ಶಾರದಾ

0
16
loading...

ಕುಮಟಾ: ಹೊನ್ನಾವರ ತಾಲೂಕಿನ ಮುಗ್ವಾ ಗ್ರಾಮ ಪಂಚಾಯತ ವ್ಯಾಪ್ತಿಯ ತನ್ಮಡಗಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ಮುಂದಿನ ಚುನಾವಣೆಯ ಕುರಿತು ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಶಾಸಕಿ ಶಾರದಾ ಮೋಹನ ಶೆಟ್ಟಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ನನ್ನ ಅವಧಿಯಲ್ಲಿ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನಡೆದಿದೆ. ಮುಂದಿನ ದಿನಗಳಲ್ಲೂ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಫಂದಿಸುತ್ತೇನೆ. ಅಲ್ಲದೇ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ಕಾಂಗ್ರೆಸ್‌ ಮಹಿಳಾಧ್ಯಕ್ಷೆ ತಾರಾ ಗೌಡ, ತಾಲೂಕಾಧ್ಯಕ್ಷೆ ಸುರೇಖಾ ವಾರೆಕರ್‌, ಕುಮಟಾ ಪುರಸಭೆ ಸದಸ್ಯ ಮಧುಸೂದನ ಶೇಟ್‌, ಪ್ರಮುಖರಾದ ಗಣೇಶ ನಾಯ್ಕ, ಐ ವಿ ನಾಯ್ಕ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

loading...