ಕೈ ಬಿಟ್ಟು ಹೊರೆಹೊತ್ತ ಮಹಿಳೆಯತ್ತ ಸಾಗಿದ ಮಗೆನ್ನವರ

0
42
loading...

ಕಾಗವಾಡ 09: ಮಾಜಿ ಶಾಸಕ, ಶಿರಗುಪ್ಪಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಕಲ್ಲಪ್ಪಣ್ಣ ಮಗೆಣ್ಣವರ ಅವರು ಸೋಮವಾರ ಮಾಜಿ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ತೊರೆದು ಅಧಿಕೃತವಾಗಿ ಇಂದು ಜೆಡಿಎಸ್‌ ಬಾವುಟ ಹಿಡಿದು ಪಕ್ಷಕ್ಕೆ ಸೇರ್ಪಡೆಗೊಂಡರು.ಅಥಣಿ ಪಟ್ಟಣದಲ್ಲಿ ಜರುಗಿದ ಕುಮಾರಪರ್ವ 2018ರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಾಜಿ ಶಾಸಕ ಕಲ್ಲಪ್ಪಣ್ಣ ಮಗೆಣ್ಣವರ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿ, ಈ ಹಿಂದೆ ಜನತಾ ಪರಿವಾರದಲ್ಲಿದ್ದು ಕಾಂಗ್ರೆಸ್‌ ಪಕ್ಷಕ್ಕೆ ಹೋಗಿದ್ದ ಮಗೆಣ್ಣವರ ಅವರು ಮರಳಿ ಪಕ್ಷಕ್ಕೆ ಬಂದಿರುವುದು ಈ ಭಾಗದಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ ಎಂದರು.ಬೆಳಗಾವಿಯಲ್ಲಿ ಎಲ್ಲ ನಾಯಕರು ಕೂಡಿಕೊಂಡು ಕಲ್ಲಪ್ಪಣ್ಣ ಮಗೆಣ್ಣವರ ಅವರನ್ನು ಕಾಗವಾಡ ಮತಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗುವುದೆಂದು ಕುಮಾರಸ್ವಾಮಿ ಹೇಳಿದರು.ಈ ವೇಳೆ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ, ಮಾಜಿ ಸಚಿವ ಬಸವರಾಜ ಹೊರಟ್ಟಿ, ಎಂ ಗೋಪಿನಾಥ, ಸುನೀತಾ ಹೊನಕಾಂಬಳೆ,ಅಥಣಿ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಗಿರೀಶ ಬುಟಾಳೆ, ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಉತ್ತಮ ಪಾಟೀಲ, ಮಾಜಿ ಜಿ.ಪಂ ಸದಸ್ಯ ಶ್ರೀಶೈಲ ತುಗಶೆಟ್ಟಿ, ಪ್ರಕಾಶ ಹಳ್ಳೋಳ್ಳಿ, ಎಂ.ಕೆ.ಪಾಟೀಲ ಸೇರಿದಂತೆ ಅನೇಕರು ಇದ್ದರು.

loading...