ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ: ತೆಂಗೇರಿ

0
19
loading...

ಕನ್ನಡಮ್ಮ ಸುದ್ದಿ-ಹೊನ್ನಾವರ: ರಾಜ್ಯ ವಿದಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮೀಣ ಮಟ್ಟದ ಮತಗಟ್ಟೆಗಳಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದು ಪ್ರತಿ ಮತಗಟ್ಟೆಯಲ್ಲಿಯೂ ಕಾಂಗ್ರೆಸ್ ಸುಭದ್ರವಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು.

ಅವರು ಚಂದಾವರ ಕಾಂಗ್ರೆಸ್ ಘಟಕ ಹೊದ್ಕೆಯ ಕಾಂಗ್ರೆಸ್ ಮುಖಂಡ ಮಾದೇವ ನಾಯ್ಕ ಮನೆಯಲ್ಲಿ ಏರ್ಪಡಿಸಿದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದರು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಐದು ವರ್ಷದ ಜನಪರ, ಪಾರದರ್ಶಕ ಆಡಳಿತ ಸಮಾಜದ ಎಲ್ಲ ವರ್ಗದವರಿಗೂ ಶ್ರೀ ರಕ್ಷೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಪುನಃ ಅಧಿಕಾರಕ್ಕೆ ಬರುವುದು ಶತಃಸಿದ್ದ ಎಂದರು.
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಾಮೋದರ ನಾಯ್ಕ ಮಾತನಾಡಿ ಕಾರ್ಯಕರ್ತರು ತಮ್ಮಲ್ಲಿರುವ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆಯಬೇಕು. ಮುಂದಿನ ಒಂದು ತಿಂಗಳು ಪಕ್ಷದ ಗೆಲುವಿಗಾಗಿ ಹಗಲು ರಾತ್ರಿ ಪರಿಶ್ರಮಿಸುವಂತೆ ಕಾರ್ಯಕರ್ತರನ್ನು ಹುರಿದುಂಬಿಸಿ ಮಾತನಾಡಿದರು. ಕಾಂಗ್ರೆಸ್ ಮುಖಂಡ ಯಶ್ವಂತ ನಾಯ್ಕ, ಹೊದ್ಕೆ ಮಾತನಾಡಿ ಪಕ್ಷದ ಕಾರ್ಯಕರ್ತರಾದ ನಾವು ಯಾವುದೇ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಳ್ಳದೇ ಪಕ್ಷದ ಗೆಲುವಿಗಾಗಿ ಪರಿಶ್ರಮಿಸುವ ಬರವಸೆಯನ್ನು ಸೇರಿದ ನಾಯಕರಿಗೆ ನೀಡಿದರು. ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿನಾಯಕ ಶೇಟ್, ಚಂದಾವರ ಗ್ರಾಮ ಪಂಚಾಯತ ಅಧ್ಯಕ್ಷ ಚಂದ್ರು ನಾಯ್ಕ, ಶಿವರಾಮ ಐಗಳ, ಲಂಬೋಧರ ನಾಯ್ಕ, ಕಿರಣ ಭಂಡಾರಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ಚಂದಾವರ ಕಾಂಗ್ರೆಸ್ ಘಟಕದ ಅಧ್ಯಕ್ಷ ತಿಮ್ಮಪ್ಪ ನಾಯ್ಕ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಕಾಂಗ್ರೆಸ್ ಮುಖಂಡ ಮಾದೇವ ನಾಯ್ಕ ವಂದಿಸಿದರು.

loading...