ಜೆಡಿಎಸ್ ಸ್ವತಂತ್ರ ಸರ್ಕಾರ ರಚಿಸಲಿದೆ: ಶರವಣ

0
23
loading...

ಹುಬ್ಬಳಿ: ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಸಾಯಿ ಗೋಲ್ಡ ಮಾಲಿಕ ಹಾಗೂ ಜೆಡಿಎಸ್ ಮುಖಂಡ ಟಿ.ಎ.ಶರವಣ , ಜೆಡಿಎಸ್ ಕಿಂಗ್ ಮೇಕರ್ ಆಗಲ್ಲ. ಈ ಬಾರಿ ನಾವೇ ಕಿಂಗ್. ಅದರಲ್ಲಿ ಯಾವುದೇ ಸಂದೇಹ ಇಲ್ಲ. ಈ ಬಾರಿ ನಾವು 110 ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಈ ಬಾರಿ ರಾಜ್ಯಾದ್ಯಂತ ಜನ ಜೆಡಿಎಸ್‍ನತ್ತ ಒಲವು ತೋರಿದ್ದಾರೆ. ಎಲ್ಲ ಕ್ಷೇತ್ರದಲ್ಲೂ ಜೆಡಿಎಸ್ ಜಯಭೇರಿ ಭಾರಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಜಾತ್ಯಾತೀತ ಜನತಾದಳ ಪಕ್ಷ ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ರಚಿಸಲಿದೆ ಎಂದು ಪಕ್ಷದ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ, ಅವರಪ್ಪನಾಣೆ ಎಂದು ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಆದ್ರೆ ಅವರ ರಾಜಕೀಯ ಗುರು ದೇವೇಗೌಡ್ರು ಎಂಬುದನ್ನು ಅವರು ಮರೆತಿದ್ದಾರೆ ಎಂದು ಕುಟುಕಿದರು. ಉತ್ತರ ಕರ್ನಾಟಕ ಭಾಗದಲ್ಲಿ ಜಗದೀಶ್ ಶೆಟ್ಟರ್, ಸಿಎಂ ಆಗಿ ವಿರೋಧ ಪಕ್ಷದ ನಾಯಕನಾಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ರಾಜ್ಯದ ಜನ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ಸಂಸದ ಪ್ರಹ್ಲಾದ್ ಜೋಶಿಗೆ ಓಟು ಕೇಳುವ ನೈತಿಕ ಹಕ್ಕಿಲ್ಲ. ಬಿಜೆಪಿ 72 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಮೊದಲ ಪಟ್ಟಿಯಿಂದ 15ಜನ ಬಂಡಾಯವೆದ್ದಿದ್ದಾರೆ. ಆದರೆ, ಜೆಡಿಎಸ್ ಒಂದೇ ಬಾರಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯಾವುದೇ ಬಂಡಾಯವಿಲ್ಲ ಎಂದರು. ಕಾಂಗ್ರೆಸ್ ಹಾಗೂ ಬಿಜೆಪಿ ಮುಕ್ತ ಕರ್ನಾಟಕ ಮಾಡುತ್ತೇವೆ. ಕುಮಾರಣ್ಣ ವಿಕಾಸ ಪರ್ವಕ್ಕೆ ಲಕ್ಷಾಂತರ ಜನ ಸೇರುತ್ತಿದ್ದಾರೆ. ಈ ಬಾರಿ ಜೆಡಿಎಸ್ ಸ್ವತಂತ್ರ ಸರ್ಕಾರ ರಚನೆ ಮಾಡುತ್ತದೆ. ಕಾಂಗ್ರೆಸ್ ಪಕ್ಷ ಇಡೀ ರಾಜ್ಯದ ಸಂಪತ್ತನ್ನೇ ಲೂಟಿ ಮಾಡಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷ ಇಡೀ ರಾಜ್ಯದ ಸಂಪತ್ತನ್ನು ಲೂಟಿ ಮಾಡಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ ಎಂದು ಅವರು ಹೇಳಿದರು.

ಪ್ರಧಾನಿ ಮೋದಿಯವರು ಇದುವರೆಗೆ ಜನತೆಗೆ ಕೊಟ್ಟ ಭರವಸೆಗಳಲ್ಲಿ ಯಾವುವೂ ಈಡೇರಿಲ್ಲ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯಾವುದೇ ಸಹಾಯವೂ ದೊರಕಿಲ್ಲ ಅದರ ಪರಿಣಾಮ ಪ್ರಸಕ್ತ ಚುನಾವಣಾ ಫಲಿತಾಂಶದ ಮೇಲಾಗಲಿದೆ ಎಂದು ಅವರು ಹೇಳಿದರು. ಪಕ್ಷದ ಧುರೀಣರಾದ ಮುಜಾಹಿದ್ ಕಾಂಟ್ರ್ಯಾಕ್ಟರ್ ಅಲ್ತಾಫ್ ನವಾಜ ಎಂ.ಕಿತ್ತೂರ, ರಾಜಣ್ಣ ಕೊರವಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

loading...