ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಧರಣಿ

0
25
loading...

ಕನ್ನಡಮ್ಮ ಸುದ್ದಿ-ಕಾರವಾರ: ದೇಶಾದ್ಯಂತ ದಲಿತರ ಮೇಲಿನ ದೌರ್ಜನ್ಯ ತಡೆಯಲು ಪ್ರಬಲ ಕಾನೂನು ರೂಪಿಸಿ, ಇತ್ತೀಚೆಗೆ ಸುಪ್ರೀಂ ಕೋರ್ಟ್‌ ತೀರ್ಪಿನಿಂದ ದುರ್ಬಲಗೊಂಡಿರುವ ದೌರ್ಜನ್ಯ ತಡೆ ಕಾಯಿದೆಯನ್ನು ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಯವರು ಮಧ್ಯಪ್ರವೇಶಿಸಿ ಆದೇಶ ವಾಪಸ್‌ ಪಡೆಯಲು ಸುಪ್ರೀಂ ಕೋರ್ಟ್‌ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ನೇತ್ರತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಹಿಂಬದಿಯ ಮಹಾತ್ಮಾ ಗಾಂಧಿ ರಸ್ತೆ ಮೇಲೆ ವಿವಿಧ ದಲಿತ ಸಂಘಟನೆಯ ನೂರಾರು ಕಾರ್ಯಕರ್ತರು ಧರಣಿ ಕುಳಿತು ಸರಕಾರ ಹಾಗೂ ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ದಿಕ್ಕಾರ ಕೂಗಿದರು.
ಆದ್ದರಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ದೇಶದಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಯಲು ಪ್ರಬಲ ಕಾನೂನು ರೂಪಿಸಿ, ಸದ್ಯ ಸುಪ್ರೀಂ ಕೋರ್ಟ್‌ ತೀರ್ಪಿನಿಂದ ದುರ್ಬಲಗೊಂಡಿರುವ ದೌರ್ಜನ್ಯ ತಡೆ ಕಾಯಿದೆಯನ್ನು ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಯವರು ಮಧ್ಯಪ್ರವೇಶಿಸಿ ಆದೇಶ ವಾಪಸ್‌ ಪಡೆಯಲು ಸುಪ್ರೀಂ ಕೋರ್ಟ್‌ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಬಿ.ಎಂ.ಮಡ್ಲಿ, ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಲಿಷಾ ಎಲಕಪಾಟಿ, ಜಿಲ್ಲಾ ಸಂಚಾಲಕ ಎಸ್‌.ಫಕೀರಪ್ಪ,ಶ್ಯಾಮ್‌ಸುಂದರ್‌ ಗೋಕರ್ಣ, ಕಲ್ಲಪ್ಪ ಹೋಳಿ, ದುಂಡಪ್ಪ ಬಂಡಿವಡ್ಡರ್‌, ಬಸವರಾಜ ಎಫ್‌.ಹರಿಜನ ಮುಂತಾದ ಪ್ರಮುಖರು ಇದ್ದರು.

loading...