ನಾಳೆಗೆ ಸಲ್ಮಾನ್ ಜಾಮೀನುತೀರ್ಪು

0
11
loading...

ಜೋದ್‍ಪುರ್ಕೃ ಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷಗಳ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್‍ಖಾನ್ ಜಾಮೀನು ಅರ್ಜಿ ತೀರ್ಪನ್ನು ಜೋದ್‍ಪುರ್ ಸೆಷನ್‍ಕೋರ್ಟ್ ನಾಳೆಗೆ ಕಾಯ್ದಿರಿಸಿದೆ. ಈ ಜಾಮೀನು ಅರ್ಜಿ ಕುರಿತ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವೀಂದ್ರಕುಮಾರ್ ಜೋಷಿ, ಪ್ರಕರಣದ ವಿಚಾರಣೆಯನ್ನು ನಾಳೆಗೆ ಕಾಯ್ದಿರಿಸಿದರು. ಇದಕ್ಕೂ ಮುನ್ನ ಕೋರ್ಟ್‍ನಲ್ಲಿ ವಾದ ಮಂಡಿಸಿದ ಸಲ್ಮಾನ್‍ಖಾನ್ ಪರ ಹಿರಿಯ ವಕೀಲ ಮಹೇಶ್‍ಬೋರಾ, ಈ ಪ್ರಕರಣದಲ್ಲಿ ಸಾಕ್ಷಿಗಳನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ಸಲ್ಮಾನ್ ಈಗಾಗಲೇ ಖುಲಾಸೆಗೊಂಡಿದ್ದಾರೆ. ಅಲ್ಲದೆ, ಈ ಸಂಬಂಧದ ಇತರೆ ಮೂರು ಪ್ರಕರಣಗಳಲ್ಲೂ ಇವರು ನಿರ್ದೋಷಿಯಾಗಿದ್ದಾರೆ ಎಂದು ವಾದ ಮಂಡಿಸಿದರು.

loading...