ಪ್ರಜಾಪ್ರಭುತ್ವದ ಸುಭದ್ರತೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಕರೆ

0
28
loading...

ಕನ್ನಡಮ್ಮ ಸುದ್ದಿ-ವಿಜಯಪುರ: ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಸಕ್ರೀಯ ಪಾತ್ರ ವಹಿಸಲಿರುವ ಯುವ ಜನಾಂಗ ಪ್ರಜಾಪ್ರಭುತ್ವದ ಸುಭದ್ರತೆಗಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ತಪ್ಪದೇ ಪಾಲ್ಗೊಳ್ಳುವಂತೆ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸುಂದರೇಶಬಾಬು ಅವರು ಹೇಳಿದರು.
ನಗರದ ಪ್ರಥಮ ದರ್ಜೆ ಕಾಲೇಜ್‌ದಲ್ಲಿಂದು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಮತದಾರ ನೊಂದಣಿ ಹಾಗೂ ಮತದಾನದ ಮಹತ್ವ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತವಾಗಿದೆ. ಅತಿ ಹೆಚ್ಚಿನ ಯುವ ಜನಾಂಗವು ಈ ರಾಷ್ಟ್ರ ಹೊಂದಿದ್ದು, ಯುವ ಜನಾಂಗ ದೇಶಕ್ಕಾಗಿ ಕೊಡುಗೆ ನೀಡಲು ಹಾಗೂ ತಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಮುಂಬರುವ ವಿಧಾನಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ವಿಶೇಷವಾಗಿ ಮತದಾರ ಪಟ್ಟಿಯಲ್ಲಿ ಹೆಸರು ತಪ್ಪದೇ ನೊಂದಾಯಿಸಬೇಕು. ತಪ್ಪದೇ ಮತದಾನವನ್ನು ಮಾಡುವಂತೆ ಕರೆ ನೀಡಿದರು.
ಸಾಮಾಜಿಕ ಜಾಲತಾಣಗಳ ಸದ್ಭಳಕೆ ಮಾಡಿಕೊಂಡು ಮತದಾನದ ಮಹತ್ವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮುಂದೆ ಬರುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜ್‌ನ ಪ್ರಾಚಾರ್ಯ ಡಾ.ಎಂ.ಪಿ.ನಾಯಕ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ಎಸ್‌.ಜಿ.ಲೋಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎಸ್‌.ಡಿ.ನದಾಫ್‌ ಪ್ರೊ: ಎಚ್‌.ಎ.ಕಲಾದಗಿ, ಎಸ್‌.ಡಿ.ತೋಂಟಾಪುರ, ಉಪಸ್ಥಿತರಿದ್ದರು. ಪ್ರೊ. ಎ.ಆಯ್‌.ಹಂಜಗಿ ನಿರ್ವಹಿಸಿದರು.

loading...