ಬಸವಾದಿ ಶರಣರ ಆದರ್ಶ ಕಾಲಾತೀತ: ಜಿಲ್ಲಾಧಿಕಾರಿ ನಕುಲ್

0
30
loading...

ಕಾರವಾರ: ಬಸವಣ್ಣ ಸೇರಿದಂತೆ 12ನೇ ಶತಮಾನದ ಶರಣರ ಆದರ್ಶಗಳು ಎಂದಿಂಗಿಗೂ ಪ್ರಸ್ತುತ ಅವರ ವಚನ ಸಾರ ಕಾಲಾತೀತ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಬಣ್ಣಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮ ಸಮಾಜದ ನಿರ್ಮಾಕ್ಕಾಗಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಬಸವಣ್ಣನವರು ತಮ್ಮ ವಚನಗಳ ಮೂಲಕ ಎಲ್ಲ ತಳ ಸಮುದಾಯಗಳಲ್ಲಿ ಆತ್ಮಸ್ಥೈರ್ಯ ತುಂಬಿದರು. ಈ ಮೂಲಕ ಮಾಡಿದ ಬಸವಾದಿ ಶರಣರ ಆದರ್ಶಗಳು ಎಂದೆಂದಿಗೂ ಪ್ರಸ್ತತ ಎಂದರು.
ಬಸವಣ್ಣ ಅವರ ಪ್ರತಿ ವಚನವೂ ಜಗತ್ತಿಗೆ ಒಂದೊಂದು ಸಂದೇಶವನ್ನು ಕೊಟ್ಟಿದೆ. ಸಮಾನತೆಯನ್ನು ಸಾರುವ ಅವರ ವಚನಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ತಮ್ಮ ಬದುಕಿನಲಿ ಸಾರ್ಥಕತೆ ಕಾಣಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಕೆ.ಪ್ರಕಾಶ್ ಮಾತನಾಡಿ, ಹೆಣ್ಣಿಗೆ ಸಮಾನ ಸ್ವಾತಂತ್ರ್ಯ ಕೊಟ್ಟ ಮೊದಲಿಗ ಬಸವಣ್ಣ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹಿಮಂತರಾಜು ಪ್ರಸ್ತಾವಿಕ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

loading...