ಬಿಜೆಪಿ ಪಕ್ಷ ಅಧಿಕಾರಕ್ಕೆ ತರಲು ಅಮಿತ್ ಶಾ ಕರೆ

0
17
loading...

ಬಾಗಲಕೋಟೆ: ಜಿಲ್ಲೆಯ ಮುಧೋಳ ಪಟ್ಟಣಕ್ಕೆ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಭೇಟ್ಟಿ ನೀಡಿ, ಬೆಳಗಾವಿ ವಿಭಾಗ ಮಟ್ಟದ ಶಕ್ತಿ ಕೇಂದ್ರದ ಪ್ರಮುಖರ ಸಮಾವೇಶದಲ್ಲಿ ಭಾಗವಹಿಸಿ,ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಕಾರ್ಯತಂತ್ರ ರೂಪಿಸಿಲು ಕಾರ್ಯಕರ್ತರಿಗೆ ಕರೆ ನೀಡಿದರು.
ಹೆಲಿಕ್ಟಾಪರ್ ಮೂಲಕ ಮುಧೋಳಕ್ಕೆ ಪಟ್ಟಣಕ್ಕೆ ಆಗಮಿಸಿದ ಅಮಿತ್ ಶಾ,ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಶಕ್ತಿ ಕೇಂದ್ರದ ಪ್ರಮುಖರ ಸಮಾವೇಶವನ್ನು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೊರಪ್ಪ ಮಾತನಾಡಿ,ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ವತಹ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಕ್ಕೆ ಭಯ ಪಡುತ್ತಿದ್ದಾರೆ.ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಂತ್ರಕ್ಕೆ ಪ್ರತಿ ರಣತಂತ್ರ ರೂಪಿಸಿ,ಸಿದ್ದರಾಮಯ್ಯನವರಿಗೆ ಸೋಲಿಸಲಾಗುವುದು ಎಂದು ತಿಳಿಸಿದರು.ಮಾಧ್ಯಮದವರಿಗೆ ಚಿತ್ರೀಕರಣಕ್ಕೆ ಅವಕಾಶವನ್ನು ನೀಡದೇ ನಂತರ ನಡೆದ ಸಭೆಯಲ್ಲಿ ಅಮಿತ್ ಶಾ ಮಾತನಾಡಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಕರೆ ನೀಡಿ,ಮುಂಬರುವ ಮೇ 16 ರಂದು ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೊರಪ್ಪನವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಹೆಚ್ಚು ಶ್ರಮ ವಹಿಸಬೇಕಾಗಿದೆ ಎಂದು ತಿಳಿಸಿ,ಬಿಜೆಪಿ ಪಕ್ಷದ ಪ್ರಮುಖರು 19 ಅಂಶದ ಸೂತ್ರವನ್ನು ಪಾಲಿಸಿಕೊಂಡು ಅಧಿಕಾರಕ್ಕೆ ತರಲುವಲ್ಲಿ ಸಂಘಟನೆ ಮಾಡಬೇಕು ಎಂದು ಕರೆ ನೀಡಿದರು.

loading...