ಮತದಾನ ಜಾಗೃತಿಗಾಗಿ ಕಾನೂನು ಅರಿವು-ನೆರವು

0
24
loading...

ಕನ್ನಡಮ್ಮ ಸುದ್ದಿ-ಕೊಪ್ಪಳ : ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮೇಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಇವರ ಸಹಯೋಗದಲ್ಲಿ ಮೂಲ ಕಾನೂನು ಹಾಗೂ ಮತದಾನ ಜಾಗೃತಿ ಕುರಿತು ಕಲ್ಯಾಣ ನಗರದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗುರುವಾರದಂದು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀನಿವಾಸ ಅವರು ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ಮುಕ್ತವಾಗಿ ಮತದಾನ ಮಾಡಲು ಹಕ್ಕಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ. 12 ರಂದು ನಡೆಯಲಿದ್ದು, ಮನೆಯಲ್ಲಿ ಕೂಡದೇ ಪ್ರತಿಯೊಬ್ಬರೂ ಮತಗಟ್ಟೆಗೆ ಹೋಗಿ ಮತ ಚಲಾಯಿಸಿ, ನಿಮ್ಮ ಕರ್ತವ್ಯವನ್ನು ಪಾಲಿಸಿ ಎಂದು ಹೇಳಿದರು. ವಕೀಲರಾದ ಹನುಮಂತರಾವ್ ಅವರು ವಿಶೇಷ ಉಪನ್ಯಾಸ ನೀಡಿದರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಉದ್ದಗಟ್ಟಿ ತ್ರಿಮೂರ್ತಿ ಅವರು ಮಾತನಾಡಿದರು, ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

loading...