ಮಾಧ್ಯಮಗಳ ಪ್ರಚಾರಕ್ಕೆ ಪ್ರಮಾಣಪತ್ರ ಕಡ್ಡಾಯ: ಜಿಲ್ಲಾಧಿಕಾರಿ ನಕುಲ್

0
32
loading...

ಕನ್ನಡಮ್ಮ ಸುದ್ದಿ-ಕಾರವಾರ: ವಿವಿಧ ಮಾಧ್ಯಮಗಳ ಮೂಲಕ ಚುನಾವಣಾ ಪ್ರಚಾರ ಮಾಡುವ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗಳು ಕಡ್ಡಾಯವಾಗಿ ಮೀಡಿಯಾ ಸರ್ಟಿಫಿಕೇಷನ್ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ವಿಧಾನಸಭಾ ಚುನಾವಣಾ 2018ರ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಿವಿಧ ಮಧ್ಯಮಗಳ ಮೂಲಕ ಚುನಾವಣಾ ಪ್ರಚಾರ ಮಾಡುವ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿ ಕಡ್ಡಾಯವಾಗಿ ಅಪರ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿರುವ ಮೀಡಿಯಾ ಸರ್ಟಿಫಿಕೇಷನ್ ಸೆಲ್ ಮೂಲಕ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಿ ಪ್ರಮಾಣ ಪತ್ರ ಪಡೆಯಬೇಕು ಎಂದು ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಎಂಸಿಎಂಸಿ ಸಮಿತಿ ಕೊಠಡಿಯಲ್ಲಿ ನಿಗದಿತ ಅರ್ಜಿ ನಮೂನೆಗಳು ದೊರೆಯಲಿದ್ದು ಮಾಧ್ಯಮಗಳಲ್ಲಿ ಪ್ರಚಾರ ಮಾಡುವ ಮೂರು ದಿನಕ್ಕೆ ಮುಂಚಿತವಾಗಿ ಸಂಬಂಧಿಸಿದ ಡಿವಿಡಿ (ಎಲೆಕ್ಟ್ರಾನಿಕ್ ಫಾರ್ಮ್) ಎರಡು ಪ್ರತಿಯನ್ನು ಸಲ್ಲಿಸಿದಲ್ಲಿ ಅದನ್ನು ಪರಿಶೀಲಿಸಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವ ಯಾವುದೇ ಅಂಶ ಇಲ್ಲದಿರುವುದನ್ನು ದೃಢಪಡಿಸಿಕೊಂಡು ಎರಡು ದಿನದೊಳಗೆ ಪ್ರಮಾಣ ಪತ್ರ ನೀಡಲಾಗುವುದು. ಆಕ್ಷೇಪಗಳಿದ್ದಲ್ಲಿ ಅದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಎಂಸಿಎಂಸಿ ಸಮಿತಿಯಲ್ಲಿ ಅಂತಿಮವಾಗಿ ಪರಿಶೀಲಿಸಲಾಗುವುದು.

ಎಲ್‍ಇಡಿ ವಾಹನಗಳ ಮೂಲಕ ಪ್ರಚಾರ, ಎಲೆಕ್ಟ್ರಾನಿಕ್ ಮಾಧ್ಯಮಗಳಾದ ಟಿವಿ, ಕೇಬಲ್ ಟಿವಿ, ಬಲ್ಕ್ ಎಸ್‍ಎಂಎಸ್, ಇ-ಪೇಪರ್ ಮುಂತಾದ ಮಾಧ್ಯಮಗಳಲ್ಲಿ ಚುನಾವಣಾ ಪ್ರಚಾರ ಮಾಡುವವರು ಅನೆಕ್ಷ್ಚರ್ ಎ ನಮೂನೆಯಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದ್ದು ಮಾಧ್ಯಮಗಳೂ ಕೂಡ ಅಂತಹ ಯಾವುದೇ ಪ್ರಸಾರ ಮಾಡುವ ಮುನ್ನ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

loading...