ಮೇ.3ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಶಿರಸಿಗೆ

0
15
loading...

ಶಿರಸಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಮತ ಬೇಟೆಯಲ್ಲಿ ರಾಜಕೀಯ ಪಕ್ಷಗಳು ನಿರತವಾಗಿವೆ. ಬಿಜೆಪಿ ಸ್ಟಾರ್‌ ಪ್ರಚಾರಕರನ್ನು ಕಣಕೆರಿಳಿಸುತ್ತಿದ್ದು ಮೇ.3ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಶಿರಸಿಗೆ ಆಗಮಿಸಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿರಸಿ- ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಚುನಾವಣಾ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ದಿನದಿಂದ ದಿನಕ್ಕೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಬಣ್ಣ ಬಯಲಾಗುತ್ತಿದೆ. ಕಾಂಗ್ರೆಸ್‌ ಸರ್ಕಾರದ ಅತಿಯಾದ ಅಲ್ಪಸಂಖ್ಯತರ ಓಲೈಕೆ, ಬಹುಸಂಖ್ಯಾತರ ಮೇಲೆ ದೌರ್ಜನ್ಯ ಅದರ ಸೋಲಿಗೆ ಕಾರಣವಾಗಲಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯವಾದದ ಯೋಗಿ ಆದಿತ್ಯನಾಥ್‌ ಅವರನ್ನು ಶಿರಸಿ ಕ್ಷೇತ್ರಕ್ಕೆ ಪ್ರಚಾರಕ್ಕೆ ಆಹ್ವಾನಿಸಲಾಗಿದೆ ಎಂದರು. ಮೇ.3ರಂದು ಬೆಳಿಗ್ಗೆ 10 ಗಂಟೆಗೆ ನಗರದ ವಿಕಾಸಾಶ್ರಮ ಮೈದಾನದಲ್ಲಿ ಸಾರ್ವಜನಿಕ ಸಭೆ ಏರ್ಪಡಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದು ಕೋರಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸುವರು.
ಪಕ್ಷದ ಪ್ರಚಾರದ ಕುರಿತು ಮಾಹಿತಿ ನೀಡಿದ ಕಾಗೇರಿ, ಬೂತ್‌ ಸಮಿತಿ, ಪೇಜ್‌ ಪ್ರಮುಖರ ಮೂಲಕ ಬಿಜೆಪಿಯ ಕರಪತ್ರವನ್ನು ಮನೆಮನೆಗಳಿಗೆ ತಲುಪಿಸಲಾಗುತ್ತಿದೆ. ಕ್ಷೇತ್ರದಾದ್ಯಂತ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಬಿಜೆಪಿ ಗೆಲುವು ನಿಶ್ಚಿತ ಎಂದರು.
ಈ ಸಂದರ್ಭದಲ್ಲಿ ವಿವಿಧ ರಾಜಕಿಯ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು. ಈ ವೇಳೆ ಪಕ್ಷದ ನಗರ ಘಟಕದ ಅಧ್ಯಕ್ಷ ಗಣಪತಿ ನಾಯ್ಕ, ಪ್ರಮುಖರಾದ ರಮಾಕಾಂತ ಭಟ್ಟ, ನಂದನಸಾಗರ, ರಿತೇಶ ಕೆ., ಪವಿತ್ರ ಹೊಸೂರು ಹಾಗೂ ಇತರರು ಇದ್ದರು.

loading...