ಮೇ.6 ಕ್ಕೆ ಗದುಗಿಗೆ ಪ್ರಧಾನಿ ಮೋದಿ

0
16
loading...

ಕನ್ನಡಮ್ಮ ಸುದ್ದಿ-ಗದಗ: ಕರ್ನಾಟಕದ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ. 6 ರಂದು ಕರ್ನಾಟಕದಲ್ಲಿ ಪ್ರವಾಸ ಕೈಗೊಳ್ಳಲಿದ್ದು ಅಂದು ಗದಗ ಜಿಲ್ಲೆಗೂ ಆಗಮಿಸಲಿದ್ದಾರೆ ಎಂದು ಗದಗ ಜಿಲ್ಲಾ ಬಿಜೆಪಿ ಘಟಕ ಅಧಿಕೃತವಾಗಿ ತಿಳಿಸಿದೆ. ಗದಗ ನಗರದಲ್ಲಿ ಮೇ. 6 ರಂದು ಬಿಜೆಪಿಯ ಬೃಹತ್ ಸಮಾವೇಶ ನಡೆಸಿ ಗದಗ ಜಿಲ್ಲೆಯ ಗದಗ, ಶಿರಹಟ್ಟಿ, ನರಗುಂದ, ರೋಣ ವಿಧಾನಸಭಾ ಮತಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಚುನಾವಣಾ ಪ್ರಚಾರ ಮಾಡಲಿದ್ದಾರೆಂದು ಜಿಲ್ಲಾ ಬಿಜೆಪಿ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

loading...