ಸರಕಾರದ ಸಾಧನೆ-ಯೋಜನೆ ಜನತೆಗೆ ತಿಳಿಸಿರಿ

0
24
loading...

ಬಾಗಲಕೋಟ : ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಇಂದು ದಿ.12 ರಂದು ಜಿಲ್ಲಾ ಪ್ರಚಾರ ಸಮಿತಿ ಸಭೆಯೊಂದು ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ ವಾಸನದ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಸರಕಾರ ಕೈಗೊಂಡಿರುವ ಜನಪರ, ಅಭಿವೃದ್ಧಿ ಪರ ಕಾಮಗಾರಿಗಳನ್ನು ಹಾಗೂ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ ಪ್ರತಿಯೊಂದು ಮನೆಯಲ್ಲಿ ಸರಕಾರದ ಯೋಜನೆಗಳ ಫಲಾನುಭವಿಗಳು ಸಿಗುತ್ತಾರೆ ಅದನ್ನು ಮನವರಿಕೆ ಮಾಡುವ ಕಾರ್ಯ ಕಾರ್ಯಕರ್ತರದ್ದಾಗಿದೆ ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರಕಾರದಿಂದ ಆಗಿರುವ ಸಾಧನೆಗಳ ಬಗ್ಗೆ ತಿಳಿಸಬೇಕೆಂದು ಹೇಳಿದರು.

ನಗರದಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಬೂತನಲ್ಲಿ ಪ್ರಚಾರ ಸಮಿತಿಯನ್ನು ರಚಿಸಿ ಮುಂಬರುವ ಚುನಾವಣೆಯಲ್ಲಿ ಯಾವ ರೀತಿಯಲ್ಲಿ ಪ್ರಚಾರ ಕೈಗೊಳ್ಳಬೇಕೆಂಬ ಬಗ್ಗೆ ಸಲಹೆ ಸೂಚನೆಗಳನ್ನು ಪಡೆದುಕೊಂಡು ಮಾರ್ಗದರ್ಶನ ಮಾಡಲಾಯಿತು. ಅವರು ಮುಂದುವರೆದು ಮಾತನಾಡಿ ಪ್ರಚಾರ ಸಮಿತಿಯ ಪದಾಧಿಕಾರಿಗಳು ತಮ್ಮ ಕಾರ್ಯವನ್ನು ಅತೀ ಕಟ್ಟುನಿಟ್ಟಾಗಿ ಮಾಡುವ ಮೂಲಕ ಪಕ್ಷವನ್ನು ಬಲಪಡಿಸುವ ಮೂಲಕ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಜವಾಬ್ದಾರಿಯುತವಾಗಿ ನಿರ್ವಹಿಸಬೇಕೆಂದು ತಿಳಿಸಿದರು. ಬಾಗಲಕೋಟ ಶಾಸಕ ಎಚ್.ವೈ.ಮೇಟಿ ಅವರು 1850 ಕೋಟಿ ರೂ.ವೆಚ್ಚದಲ್ಲಿ ಕ್ಷೇತ್ರದಲ್ಲಿ ಕೈಗೊಂಡಿರುವ ಕಾಮಗಾರಿ ಬಗ್ಗೆ ಜನತೆಗೆ ಮತದಾರರಿಗೆ ಮನವರಿಕೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಕಾರ್ಯಕರ್ತರಿಗೆ ತಿಳಿಸಿದರು. ಶಾಸಕ ಎಚ್.ವೈ.ಮೇಟಿ ಅವರು ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿಯೂ ತಮ್ಮ ಅನುದಾನದಲ್ಲಿ ಸಾಕಷ್ಟು ಜನಪರ, ಅಭಿವೃದ್ಧಿ ಪರ ಕಾಮಗಾರಿಗಳನ್ನು ಕೈಗೊಂಡಿದ್ದಾರೆ ಇದನ್ನು ಕಾರ್ಯಕರ್ತರು ಪ್ರತಿಯೊಬ್ಬ ಮತದಾರನಿಗೆ ಮನವರಿಕೆ ಮಾಡಬೇಕಾಗಿದೆ ಎಂದರು.
ಸಭೆಯಲ್ಲಿ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ರಾಚಪ್ಪಣ್ಣ ಪಟ್ಟಣದ, ಕುಮಾರ ವೈಜಾಪೂರ, ತಾಜುದ್ದೀನ ಕೊಣ್ಣೂರ, ಪ್ರೇಮನಾಥ ಗರಸಂಗಿ, ಹಾಜಿಸಾಬ ದಂಡಿನ, ಭಾಸ್ಕರ್ ಅಚನೂರ, ಚೆನ್ನವೀರ ಅಂಗಡಿ, ಶ್ರೀಮತಿ ಅನ್ನಪೂರ್ಣ ಜುಮನಾಳ, ಮಹೇಶ ಜಾಲವಾದಿ, ಹುಲ್ಲಪ್ಪ ತೇಜಿ, ತಿಪ್ಪಣ್ಣ ನೀಲನಾಯಕ ಹಾಗೂ ಇತರರು ಹಾಜರಿದ್ದರು.

loading...