ಅಮರೇಗೌಡ, ಶರಣಬಸಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

0
14
loading...

ಕನ್ನಡಮ್ಮ ಸುದ್ದಿ-ಕೊಪ್ಪಳ : ವೀರಶೈವ ಲಿಂಗಾಯತ ರಡ್ಡಿ ಸಮಾಜವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿರುವ ಹಿರಿಯರಾದ ಕುಷ್ಟಗಿ ಶಾಸಕ ಅಮರೇಗೌಡ ಭಯ್ಯಾಪುರ ಹಾಗೂ ಶಹಪುರ ಶಾಸಕ ಶರಣಬಸಪ್ಪ ದರ್ಶನಾಪುರ ಅವರಿಗೆ ಸಚಿವ ಸ್ಥಾನ ನೀಡುವಂತೆ ಕರ್ನಾಟಕ ವೀರಶೈವ ಲಿಂಗಾಯತ ರಡ್ಡಿ ಸಮಾಜದ ರಾಜ್ಯಾಧ್ಯಕ್ಷ ಶೇಖರಗೌಡ ಮಾಲಿಪಾಟೀಲ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಗಣನೀಯ ಸಂಖ್ಯೆಯಲ್ಲಿರುವ ವೀರಶೈವ ಲಿಂಗಾಯತ ರಡ್ಡಿ ಸಮಾಜವು, ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ಪಾತ್ರವಹಿಸುತ್ತಾ, ಜನ ಸೇವೆ ಮಾಡುತ್ತಿದೆ. ವೀರಶೈವ ಲಿಂಗಾಯತ ರಡ್ಡಿ ಸಮಾಜವೂ ಹಲವಾರು ದಶಕಗಳಿಂದ ಕಾಂಗ್ರೆಸ್ ಪಕ್ಷದ ತತ್ವದಲ್ಲಿ ವಿಶೇಷ ನಂಬಿಕೆ ಇಟ್ಟುಕೊಂಡು, ಬದ್ಧತೆಯನ್ನು ಬೆಳಸಿಕೊಂಡು ಪಕ್ಷವನ್ನು ಬೆಳೆಸುವಲ್ಲಿ ಮತ್ತು ಪ್ರದೇಶ ಅಭಿವೃದ್ಧಿ ಪಡಿಸುವಲ್ಲಿ ತನ್ನದೇ ಆದ ಕೊಡುಗೆ ನೀಡಿದೆ.
ಕಾಲಕಾಲಕ್ಕೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವೂ ಈ ಸಮಾಜಕ್ಕೆ ಅಲ್ಪಮಟ್ಟಿನ ಪೆÇ್ರೀತ್ಸಾಹ ನೀಡುತ್ತಿದೆಯಾದರೂ, ಜನಾಂಗದ ಸಂಖ್ಯೆಗೆ ಅನುಗುಣವಾಗಿ ಅವಕಾಶ ನೀಡಿಲ್ಲ. ಈ ಭಾವನೆ ಸಮಾಜ ಬಾಂಧವರಲ್ಲಿ ಮಡುಗಟ್ಟಿದೆ. ಸಮಾಜದ ಜನತೆಯಲ್ಲಿರುವ ಭಾವನೆಯನ್ನು ಹೋಗಲಾಡಿಸಲು ಕಾಂಗ್ರೆಸ್ ಪಕ್ಷಕ್ಕೆ ಈ ಸದಾವಕಾಶ ಲಭ್ಯವಾಗಿದೆ. ಶಾಸಕರಾದ ಅಮರೇಗೌಡ ಭÀಯ್ಯಾಪುರ ಹಾಗೂ ಶರಣಬಸಪ್ಪ ದರ್ಶನಾಪುರ ಅವರು ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಬೆಳೆಸಲು ಇವರ ಕೊಡುಗೆ ಅಪಾರ. ಇವರಿಬ್ಬರನ್ನು ಸಚಿವರನ್ನಾಗಿ ಮಾಡಲು ಪತ್ರದಲ್ಲಿ ಕೋರಿದ್ದಾರೆ.

loading...