ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಉತ್ತಮ ವಾತಾವರಣವಿದೆ: ದೂಳಿ

0
15
loading...

ಕನ್ನಡಮ್ಮ ಸುದ್ದಿ-ಮುಂಡಗೋಡ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾಡುತ್ತಿರುವ ಸಾದನೆ ಜಗತ್ತಿಗೆ ಮಾದರಿಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಕೂಡ ಭಾರತೀಯ ಜನತಾ ಪಕ್ಷಕ್ಕೆ ಉತ್ತಮ ವಾತಾವರಣವಿದೆ. ಜನರು ಸ್ವಯಂಪ್ರೇರಿತವಾಗಿ ಪಕ್ಷದೊಂದಿಗೆ ಕೈಜೋಡಿಸಿ ಬೆಂಬಲಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ದೂಳಿ ಹೇಳಿದರು.
ಮಂಗಳವಾರ ಸಂಜೆ ಇಲ್ಲಿಯ ಬಿಜೆಪಿ ಕಾರ್ಯಲಯದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೆಸ ಸರ್ಕಾರ ಲಿಂಗಾಯತ ಪ್ರತ್ಯೇಕ ಧರ್ಮದ ವಿಷ ಬೀಜ ಬಿತ್ತಿ ಧರ್ಮ ಒಡೆಯುವ ಕೆಲಸ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ವಿ.ಎಸ್ ಪಾಟೀಲ ಗೆಲ್ಲುವುದು ಮಾತ್ರವಲ್ಲದೇ ಜಿಲ್ಲೆಯಲ್ಲಿಯೇ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದು ರಾಜ್ಯದ ಚುಕ್ಕಾಣಿ ಹಿಡಿಯುವಲ್ಲಿ ಸಹಕಾರಿಯಾಗಲಿದೆ ಎಂದರು. ನಿವೃತ್ತ ಪೊಲೀಸ ವರಿಷ್ಠಾಧಿಕಾರಿ ಜಿ.ಆರ್ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದರೆ ಮರಾಠಾ ಸಮಾಜಕ್ಕೆ ಪ್ರ ವರ್ಗ 1 ರಲ್ಲಿ ಮೀಸಲಾತಿ ಕಲ್ಪಿಸುವ ಬರವಸೆ ನೀಡಿರುವುದರಿಂದ ಈ ಬಾರಿ ಮರಾಠಾ ಸಮಾಜ ಸಂಪೂರ್ಣವಾಗಿ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಹೇಳಿದರು. ಎಸ್.ಕೆ.ಗೌಡ, ಮಹೇಶ ಹೊಸಕೊಪ್ಪ, ತುಕಾರಾಮ ಮಿರಾಶಿ, ಅನಂತ ಲಾಡ, ಪಾಂಡುರಂಗ ಪಾಟೀಲ ಮುಂತಾವರಿದ್ದರು.

loading...