ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇನೆ: ಹೆಚ್.ಡಿ.ಕುಮಾರಸ್ವಾಮಿ

0
12
ಬೆಂಗಳೂರು; ವಿಧಾನಸಭಾ ಚುನಾವಣೆ ವೇಳೆ ಬಿಡುಗಡೆ ಮಾಡಿ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಪ್ರತೀಯೊಂದು ಭರವಸೆಯನ್ನೂ ಈಡೇರಿಸುತ್ತೇನೆಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರೈತರ ಹಿತಕ್ಕಾಗಿ ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಪಲಾಯನ ಮಾಡುವುದಿಲ್ಲ. ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ನೀಡಲಾದ ಪ್ರತೀಯೊಂದು ಭರವಸೆಯನ್ನೂ ಈಡೇರಿಸಲಾಗುತ್ತದೆ. ರೈತ ಸಮುದಾಯದ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಪ್ರಮುಖ ಆದ್ಯತೆ ಎಂದು ಹೇಳಿದ್ದಾರೆ. 
ಪ್ರಸ್ತುತದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಯಾಗುತ್ತಿರುವುದಕ್ಕೆ ನನಗೆ ಸಂಪೂರ್ಣ ತೃಪ್ತಿ ತಂದಿಲ್ಲ. ಮನಸ್ಸಿನಲ್ಲಿ ಒಂದು ನೋವು ತುಂಬಿಕೊಂಡೇ ಅಧಿಕಾರ ಸ್ವೀಕರಿಸುತ್ತಿದ್ದೇನೆ. ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕೆಂಬುದು ನನ್ನ ಆಸ್ಕೆಯಾಗಿದ್ದು ಎಂದು ಇದೇ ವೇಳೆ ಬೇಸರ ವ್ಯಕ್ತಪಡಿಸಿದ್ದಾರೆ.
loading...