ಕಾಂಗ್ರೆಸ್, ಜೆಡಿಎಸ್ ಜಂಟಿಯಾಗಿ ಪ್ರತಿಭಟನೆ

0
22

loading...

ಬೆಂಗಳೂರು: ಬಹುಮತದ ಕೊರತೆ ಇದ್ದಾಗ್ಯೂ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಗ್ಗೂಡಿ ಜಂಟಿಯಾಗಿ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಪ್ಪು ಪಟ್ಟಿ ಮತ್ತು ಗಾಂಧಿ ಟೋಪಿ ಧರಿಸಿ ಧರಣಿ ಸತ್ಯಾಗ್ರಹ ನಡೆಸಿದವು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಬ್ ನಬಿ ಆಜಾದ್, ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಎಐಸಿಸಿ ಪ್ರಧಾನಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹಲೋಟ್, ಮುಖಂಡರಾದ ರಾಮಲಿಂಗಾರೆಡ್ಡಿ, ಆರ್.ವಿ.ದೇಶಪಾಂಡೆ, ಎಸ್.ಆರ್.ಪಾಟೀಲ್, ಕೆ.ಸಿ.ಕೊಂಡಯ್ಯ, ಎಚ್.ಕೆ.ಪಾಟೀಲ್ ಸೇರಿದಂತೆ ಕಾಂಗ್ರೆಸ್‍ನ ಎಲ್ಲಾ 78 ಮಂದಿ ಶಾಸಕರು, ಜೆಡಿಎಸ್‍ನ ಮುಖಂಡರು, ವಿಧಾನಪರಿಷತ್ ಸದಸ್ಯರು, ಸಂಸದರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು

loading...