ಝಾನ್ಸಿ ರಾಣಿ ಸಂಜೀವಿನಿ ಮಹಿಳಾ ಒಕ್ಕೂಟಕ್ಕೆ ರಾಷ್ಟ್ರೀಯ ಪ್ರಶಸ್ತಿ

0
16
loading...

ಕನ್ನಡಮ್ಮ ಸುದ್ದಿ-ಕೊಪ್ಪಳ : ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಝಾನ್ಸಿ ರಾಣಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಕ್ಕೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ನವದೆಹಲಿ ಇವರಿಂದ ಜಾರ್ಖಂಡ್ ರಾಜ್ಯದ ರಾಂಚಿಯಲ್ಲಿ ಇತ್ತೀಚೆಗೆ ನಡೆದ ಅಜೀವಿಕಾ ದಿವಸ್ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದ್ದು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ವೆಂಕಟರಾಜಾ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನವು ಪ್ರತಿ ವರ್ಷವು “ಅಜೀವಿಕಾ ದಿವಸ್”ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಒಕ್ಕೂಟ ಮತ್ತು ಸ್ವಸಹಾಯ ಗುಂಪುಗಳಿಗೆ ರಾಷ್ಟ್ರೀಯ ಪುರಸ್ಕಾರ ನೀಡುತ್ತದೆ. ಕರ್ನಾಟಕ ರಾಜ್ಯದಿಂದ ಝಾನ್ಸಿ ರಾಣಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಸಾಧನೆಗಳನ್ನು ಮನಗೊಂಡು ಭಾರತ ಸರಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯವು 2017-18ನೇ ಸಾಲಿನ ರಾಷ್ಟ್ರೀಯ ಪುರಸ್ಕಾರ ನೀಡಿ, ಒಕ್ಕೂಟಕ್ಕೆ ಗೌರವಿಸಿದೆ. ಒಕ್ಕೂಟದಿಂದ ಸ್ವ-ಸಹಾಯ ಸಂಘದ 342 ಸದಸ್ಯರಿಗೆ ಜನ್‍ದನ್ ಯೋಜನೆ ಅಡಿಯಲ್ಲಿ ಬ್ಯಾಂಕ್ ಖಾತೆಗಳನ್ನು ಮಾಡಿಸಲಾಯಿತು. ಮತ್ತು 493 ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಣೆ ಮಾಡಿಸಲಾಗಿದೆ.
ಸಂಗನಾಳ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವಂತ ನಿರುದ್ಯೋಗ ಯುವಕ-ಯುವತಿಯರಿಗೆ ರಾಜೀವ್ ಗಾಂಧಿ ಚೈತನ್ಯ ಯೋಜನೆಯ ಸ್ವ-ಉದ್ಯೋಗದ ಅಡಿಯಲ್ಲಿ ಕಳೆದ 3 ವರ್ಷಗಳಿಂದ 69 ಫಲಾನುಭವಿಗಳಿಗೆ ಸ್ವ-ಉದ್ಯೋಗ ತರಬೇತಿ ಪಡೆಯಲು ಹಾಗೂ ರೂ.6.90 ಲಕ್ಷಗಳ ಸಹಾಯ ಧನ ಮತ್ತು ಪಿಕೆಜಿ ಬ್ಯಾಂಕ್‍ನಿಂದ ಒಟ್ಟು ರೂ. 34 ಲಕ್ಷಗಳ ಸಾಲ ಪಡೆದು, ವಿವಿಧ ಸ್ವ ಉದ್ಯೋಗಗಳನ್ನು ಕೈಗೊಳ್ಳುವಲ್ಲಿ ಒಕ್ಕೂಟವು ಸಹಾಯವಾಗಿದೆ. ಸಂಗನಾಳ ಗ್ರಾಮದ ಝಾನ್ಸಿ ರಾಣಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಕ್ಕೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ನವದೆಹಲಿ ಇಂದ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ವೆಂಕಟರಾಜಾ ಅವರು ತಿಳಿಸಿದ್ದಾರೆ.

ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ 260 ಕುಟುಂಬಗಳಿಗೆ ಶೌಚಾಲಯವನ್ನು ನಿರ್ಮಿಸಿಕೊಳ್ಳಲು ಪ್ರೇರೇಪಿಸಿ ಯಶಸ್ವಿಯಾಗಿದ್ದಾರೆ. ಒಕ್ಕೂಟವು ತನಗೆ ಸಂಬಂದಪಟ್ಟ ಎಲ್ಲ ದಾಖಲಾತಿಗಳನ್ನು ಉತ್ತಮವಾಗಿ ನಿರ್ವಹಿಸಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸುವುದಕ್ಕೆ ಒಕ್ಕೂಟದ ವ್ಯಾಪ್ತಿಯಲ್ಲಿರುವಂತ ಎಲ್ಲಾ ಸ್ವಸಹಾಯ ಗುಂಪಿನ ಮಹಿಳೆಯರು ಒಗ್ಗಟ್ಟಿನಿಂದ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಿಕ್ಕೆ ಮನವಿಯನ್ನು ಸಲ್ಲಿಸಿ, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯಾಗಲು ಕಾರಣರಾಗಿದ್ದಾರೆ.

loading...