ಡಿ.ಕೆ.ಶಿವಕುಮಾರ್ ಗೆ ಭಾರೀ ಅಂತರದ ಗೆಲುವು

0
24
loading...

ಬೆಂಗಳೂರು – ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು 79,909 ಮತಗಳ ಅಂತರದಿಂದ ಭಾರೀ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾರಾಯಣಗೌಡ ಅವರು 47,643 ಮತಗಳನ್ನು ಪಡೆದು ಪರಾಜಿತಗೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ 1,27,552 ಮತಗಳನ್ನು ಪಡೆದಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ, ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ 68,065 ಮತಗಳನ್ನು ಪಡೆದು ಪರಾಜಿತಗೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎ.ಮಂಜುನಾಥ್ 1,19,490 ಮತಗಳನ್ನು ಪಡೆದು 51,425 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ರಾಮನಗರ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ 92,077 ಮತಗಳನ್ನು ಪಡೆದು 22,289 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ 69,788 ಮತಗಳನ್ನು ಪಡೆದು ಸೋತಿದ್ದಾರೆ. ಬೊಂಬೆನಾಡು ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕುಮಾರಸ್ವಾಮಿ 87,995 ಮತಗಳನ್ನು ಪಡೆದು 21,530 ಮತಗಳ ಅಂತರದಿಂದ ಭಾರೀ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ 63,457 ಮತಗಳನ್ನು ಪಡೆದು ಪರಾಜಿತಗೊಂಡಿದ್ದಾರೆ.

loading...