ತಿಮ್ಮಾಪೂರಗೆ ಸಚಿವ ಸ್ಥಾನ ನೀಡಲು ಆಗ್ರಹ

0
26
loading...

ಬಾಗಲಕೋಟ: 2018 ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾದಿಗ ಸಮಾಜಕ್ಕೆ ಅನ್ಯಾಯವಾಗಿದೆ. ಸರ್ಕಾರ ರಚನೆಯಲ್ಲಿ ವಿಧಾನ ಪರಿಷತ್ತ ಸದಸ್ಯ, ಅಹಿಂದ ವರ್ಗ ಮತ್ತು ಮಾದಿಗ ಸಮಾಜದ ಹಿರಿಯ ನಾಯಕ ಆರ್.ಬಿ.ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಕರ್ನಾಟಕ ಮಾದಿಗ ಮಹಾಸಭಾ ಮುಖಂಡ ಗಣೇಶ ಮೈತ್ರಿ ಆಗ್ರಹಿಸಿದರು.
ಮಾಜಿ ಪ್ರಧಾನ ಮಂತ್ರಿ ದಿ.ಇಂದಿರಾ ಗಾಂಧಿ ಕಾಲದಿಂದಲು ಯಾವುದೇ ಪಕ್ಷವನ್ನು ಮಾದಿಗ ಸಮಾಜ ಹಿಂಬಾಲಿಸಿದೇ ಕಾಂಗ್ರೆಸ್ ಪಕ್ಷಕ್ಕೆ ನಿಷ್ಟಾವಂತಿಕೆ ನೀಡುತ್ತಾ ಬಂದಿದೆ. ಅಲ್ಲದೇ ಕಳೆದ 30 ವರ್ಷಗಳಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವಲ್ಲಿ ಆರ್.ಬಿ.ತಿಮ್ಮಾಪುರ ಪ್ರಮುಖ ಪಾತ್ರವಹಿಸಿದ್ದಾರೆ. ಸೋತರು, ಗೆದ್ದರು ಎದೆ ಗುಂದದೆ ಪಕ್ಷವನ್ನು ಪ್ರಭಲವಾಗಿ ಬೆಳೆಸಲಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಧೋಳ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇದ್ದಾಗಲೂ ಸಹ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪಕ್ಷ ಅ„ಕಾರಕ್ಕೆ ಬರಲು ಶ್ರಮಿಸಿದ್ದಾರೆ. ಈ ಹಿಂದೆ ರಾಜ್ಯಾದ್ಯಂತ ದಲಿತ ಮುಖ್ಯಮಂತ್ರಿ ಕುರಿತು ಧ್ವನಿ ಕೇಳಿ ಬಂದಾಗ ಪಕ್ಷ ನಿಷ್ಠೆ ಮೆರೆದು ಯಾವುದೇ ಹೇಳಿಕೆ ನೀಡಿಲ್ಲ. ಹುಬ್ಬಳ್ಳಿಯಲ್ಲಿ ಮಾದಿಗ ಸಮಾವೇಶವನ್ನು ಆಯೋಜನೆ ಮಾಡಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎದರು ಸಮಾಜದ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ಟಿಕೆಟ್ ವಂಚಿತರಾಗಿದ್ದರು ಸಹ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಆದ್ದರಿಂದ ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಸರ್ಕಾರದಲ್ಲಿ ಮಾದಿಗ ಸಮಾಜದ ಮುಖಂಡರಾದ ಆರ್.ಬಿ.ತಿಮ್ಮಾಪುರ ಅವರಿಗೆ ಸಚಿವ ಸ್ಥಾನ ನೀಡಬೇಕು. ನಿಗಮ ಮಂಡಳಿಗಳಲ್ಲಿ ನಮ್ಮ ಮಾದಿಗ ಸಮಾಜಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಮಹಾಸಭಾ ಮುಖಂಡರಾದ ಮಹಾದೇವ ಮಾದರ, ಪ್ರಕಾಶ ತಳಗೇರಿ, ಮಹೇಶ ಹುಗ್ಗಿ, ಹನುಮಂತ ಪೂಜಾರಿ, ರವಿ ಹೊಸಮನಿ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

loading...