ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

0
31
loading...

ಗದಗ : ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯಲು ಜೂ. 1 ರಿಂದ ಮಾರ್ಚ 30 ರ ವರೆಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗುವುದು. ಅರ್ಜಿಗಳನ್ನು ಸ್ವೀಕರಿಸುವ ಕೊನೆಯ ಮೇ 24 ಆಗಿದೆ. ಗದಗ ಜಿಲ್ಲೆಯ ಅಭ್ಯರ್ಥಿಗಳಿಗೆ ಮೇ. 26 ರಂದು ಬೆ. 11 ಗಂಟೆಗೆ ನಗರದ ಭೀಷ್ಮ ಕೆರೆ ಹತ್ತಿರ ಇರುವ ತೋಟಗಾರಿಕೆ ಉಪ£ರ್ದೇಶಕರ ಕಚೇರಿಯಲ್ಲಿ ಸಂದರ್ಶನ ನಡೆಸಲಾಗುವುದು. ಹಾವೇರಿ ಧಾರವಾಡ ಜಿಲ್ಲೆಯ ಅಭ್ಯರ್ಥಿಗಳಿಗೆ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಹಾವೇರಿ, ಧಾರವಾಡದಲ್ಲಿ ಸಂದರ್ಶನ ನಡೆಸಲಾಗುವುದು.
ಅರ್ಹತೆ : ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿ ತಂದೆ/ ತಾಯಿ/ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ವಯೋಮಿತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 33 ವರ್ಷ ಮತ್ತು ಇತರೆ ಅಭ್ಯರ್ಥಿಗಳಿಗೆ ಕ£ಷ್ಟ 18 ವರ್ಷ ಮತ್ತು ಗರಿಷ್ಟ 30 ವರ್ಷ. ವೆಬ್ ಸೈಟ್ www.horticulture.kar.nic.in ಅಥವಾ ತೋಟಗಾರಿಕೆ ಇಲಾಖೆಯಲ್ಲಿ ಮೇ. 24 ರವರೆಗೆ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ) ಮತ್ತು ತಾಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

loading...