ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆ

0
6
loading...

ಕನ್ನಡಮ್ಮ ಸುದ್ದಿ-ಕುಮಟಾ: ನಾನು ಶಾಸಕನಾದರೆ ಪ್ರಣಾಳಿಕೆಯಲ್ಲಿರುವ 19 ಭರವಸೆಗಳನ್ನು ಖಂಡಿತ ಈಡೇರಿಸುತ್ತೇನೆ. ಸರ್ಕಾರದ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬಿ ಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಹೇಳಿದರು.
ಅವರು ಬುಧವಾರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ, ಪತ್ರಕರ್ತರೊಂದಿಗೆ ಮಾತನಾಡಿ, ಕ್ಷೇತ್ರದ 31 ಗ್ರಾಪಂ ವ್ಯಾಪ್ತಿಗಳಿಗೆ ಬೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಅವಲೋಕಿಸುವುದಲ್ಲದೇ, ಪ್ರಧಾನಿ ಮೋದಿ ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಮುಖೇನ ಜಾಗೃತಿ ಮೂಡಿಸಲಾಗಿದೆ. ಅಲ್ಲದೇ ನನ್ನ ಪ್ರಣಾಳಿಕೆಯಲ್ಲಿ ಸಣ್ಣಮೀನುಗಾರರು ಒಟ್ಟಾಗಿ ಸೌಲಭ್ಯ ಪಡೆಯಲು ವಿಶೇಷ ಯೋಜನೆ, ಕೇಂದ್ರ ಸರ್ಕಾರ ಜಾರಿಗೊಳಿಸಿದ ಹೊಸ ಕನಿಷ್ಠ ಬೆಂಬಲ ಬೆಲೆ ನೀತಿಯ ಅನುಷ್ಠಾನ, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದ ಮಾದರಿಯನ್ನು ಹೋಲುವ ನೀತಿಯಲ್ಲಿ ರೈತರ ಸಾಲ ಮನ್ನಾ ಮಾಡುವುದು. ಸಂತೇಗುಳಿ ರಸ್ತೆಗಳನ್ನು ಅಭಿವೃದ್ಧಿ ಪಡಿಸುವುದು. ಪಶ್ಚಿಮಘಟ್ಟದಲ್ಲಿ ದೊರೆಯುವ ವಿವಿಧ ಔಷಧಿ ಸಸ್ಯಗಳ ಸಂಶೋಧನೆ ನಡೆಸಲಾಗುವುದು. ಬಡ ಕುಟುಂಬಗಳಿಗೆ ಪ್ರಧಾನಮಂತ್ರಿ ಆವಾಸ್‌ ಯೋಜನೆಯ ಲಾಭ ದೊರಕಿಸಿಕೊಡುವುದು. ವನ್ನಳ್ಳಿ ಕಡಲ ತೀರವನ್ನು ಪ್ರವಾಸಿತಾಣವಾಗಿ ನಿರ್ಮಿಸುವುದ ಹೀಗೆ ಎಲ್ಲಾ 19 ಭರವಸೆಗಳನ್ನು ಖಂಡಿತವಾಗಿ ಈಡೇರಿಸುತ್ತೇನೆ ಎಂದರು.
ಗುರುವಾರ ಬೆಳಗ್ಗೆ 10 ಗಂಟೆಗೆ ಪಟ್ಟಣದ ದೇವರಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದಿಂದ ಮಾಸ್ತಿಕಟ್ಟೆ ಸರ್ಕಲ್‌ ವರೆಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ನೇತೃತ್ವದಲ್ಲಿ ಬೃಹತ್‌ ಮೆರವಣಿಗೆ ನಡೆಯಲಿದೆ. ಸಂಜೆ 4 ಗಂಟೆಗೆ ಹೊನ್ನಾವರದ ಶರಾವತಿ ಸರ್ಕಲ್‌ನಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಂಚರಿಸಲಿದೆ. ಈ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ದಿನಕರ ಶೆಟ್ಟಿ ವಿನಂತಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಪಂ ಸದಸ್ಯ ಗಜಾನನ ಪೈ, ಬಿಜೆಪಿ ಮಂಡಲಾಧ್ಯಕ್ಷ ಕುಮಾರ ಮಾರ್ಕಾಂಡೆ, ಪ್ರಮುಖರಾದ ಅಶೋಕ ಪ್ರಭು, ವಿಶ್ವನಾಥ ನಾಯ್ಕ, ಪ್ರಶಾಂತ ನಾಯ್ಕ, ವಿನೋದ ನಾಯ್ಕ, ಹೇಮಂತಕುಮಾರ ಗಾಂವ್ಕರ್‌, ಜೈವಿಠ್ಠಲ ಕುಬಾಲ, ನವೀನ ನಾಯ್ಕ, ವಿನಾಯಕ ಅಂಬಿಗ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

loading...