ಬಿಜೆಪಿ ವಿಜಯೋತ್ಸವ ಸಭೆ

0
22
loading...

ನವದೆಹಲಿ-ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಸಂಜೆ ರಾಜಧಾನಿ ದೆಹಲಿಯಲ್ಲಿ ಬಿಜೆಪಿ ವಿಜಯೋತ್ಸವ ಸಭೆ ನಡೆಯಲಿದೆ. ಪಕ್ಷದ ಕಚೇರಿಯಲ್ಲಿ ಸಂಜೆ 6.30ಕ್ಕೆ ಸಭೆ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕುರಿತು ಕೈಗೊಳ್ಳಬೇಕಾದ ಸಿದ್ದತೆಗಳ ಬಗ್ಗೆಯೂ ಚರ್ಚೆಯಾಗಲಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರು ಹಾಗೂ ಪಕ್ಷದ ವರಿಷ್ಠರು ಸಭೆಯಲ್ಲಿ ಬಾಗವಹಿಸಲಿದ್ದಾರೆ. ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಂದಿನ ಸಿಎಂ ಮಾಡುವ ಬಗ್ಗೆಯೂ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.

loading...