ಬೇಡಿಕೆ ಈಡೇರಿಕೆಗೆ ಬ್ಯಾಂಕ್ ನೌಕರರ ಮುಷ್ಕರಕ್ಕೆ ನಿರ್ಧಾರ

0
28
loading...

ಕಾರವಾರ: ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟವು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮೇ 30 ಮತ್ತು 31 ರಂದು ನಡೆಯಲಿರುವ ಬ್ಯಾಂಕ್ ಮುಷ್ಕರಕ್ಕೆ ಬೆಂಬಲ ಸೂಚಿಸಿ ಜಿಲ್ಲಾ ಬ್ಯಾಂಕ್ ನೌಕರರ ಸಂಘವು ಮತಪ್ರದರ್ಶನ ನಡೆದರು.
ನಗರದ ಪಿಕಳೆ ರಸ್ತೆಯ ಎಸ್‍ಬಿಐ ಬ್ಯಾಂಕ್ ಪ್ರಾದೇಶಿಕ ಕಚೇರಿ ಎದುರು ಸೇರಿದ ಬ್ಯಾಂಕ್ ನೌಕರರು ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಘೋಷಣೆ ಕೂಗಿದರು. ಅಲ್ಲದೆ ಬ್ಯಾಂಕ್ ನೌಕರರ ವೇತನ ಪರಿಷ್ಕರಣೆ ಮಾಡುವಂತೆ, ಬ್ಯಾಂಕ್ ವ್ಯವಸ್ಥಾಪಕ ಮಂಡಳಿ ಐಬಿಎಯ ವಿಳಂಭದಿಂದಾಗುತ್ತಿರುವ ಅನ್ಯಾಯ, ಕೇಂದ್ರ ಸರಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದಲ್ಲದೆ ಕೈಗಾರಿಕೋದ್ಯಮಿಗಳ ಸಾಲ ವಸೂಲಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಬ್ಯಾಂಕ್‍ಸೇವಾ ಶುಲ್ಕವನ್ನು ಹೆಚ್ಚಿಸಬಾರದು, ಅವ್ಯವಹಾರ ನಡೆಸುವವರವಿರುದ್ಧ ಮಾತ್ರ ಕ್ರಮ ಕೈಗೊಂಡು ಅನಾವಶ್ಯಕವಾಗಿ ಇತರ ಉದ್ಯೋಗಿಗಳ ಮೇಲೆ ಗದಾ ಪ್ರಹಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರವಿ ತಳೇಕರ್, ಯಶವಂತ ನಾಯ್ಕ, ಸಮೀರ್ ಶೇಖ್, ಅಶೋಕ ರಾಮದಾಸ, ಸುಮ, ಶಕುಂತಲ ಇನ್ನಿತರರು ಇದ್ದರು.

loading...