ಮಂಗಲದಾಸ ಕಾಮತ ಮನೆ, ಕಚೇರಿ ಮೇಲೆ ಐಟಿ ದಾಳಿ

0
5
loading...

ಕನ್ನಡಮ್ಮ ಸುದ್ದಿ-ಕಾರವಾರ: ಸ್ಥಳೀಯ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ ಸೈಲ್‍ರ ನಿಕಟವರ್ತಿ ಹಾಗೂ ಉದ್ಯಮಿ ಮಂಗಲದಾಸ ಕಾಮತ್ ಅವರ ಅವರ್ಸಾದ ಮನೆ ಹಾಗೂ ಕಚೇರಿಯ ಮೇಲೆ ಶುಕ್ರವಾರ ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು.
ಇತ್ತಿಚೇಗಷ್ಟೆ ಶಿರಸಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭೀಮಣ್ಣ ನಾಯ್ಕ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಚುನಾವಣೆಯ ಹಿಂದಿನ ರಾತ್ರಿ ಮತದಾರರಿಗೆ ಹಂಚಲು ಅಪಾರ ಮೊತ್ತದ ಹಣವನ್ನು ಶಾಸಕ ಸೈಲ್ ಆತ್ಮೀಯ ಮಂಗಲದಾಸ ಕಾಮತ್ ಸಂಗ್ರಹಿಸಿಟ್ಟಿದ್ದಾರೆಂಬ ಮಾಹಿತಿ ಮೇರೆಗೆ ಬೆಳಗ್ಗೆ 5.30 ಕ್ಕೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದರು. ಶುಕ್ರವಾರ ಸಂಜೆಯವರೆಗೆ ದಾಖಲೆಗಳನ್ನು ಪರಿಶೀಲಿಸಿದ ಐಟಿ ಅಧಿಕಾರಿಗಳು ದಾಳಿಯ ಮಾಹಿತಿಯನ್ನು ನೀಡಲು ನಿರಾಕರಿಸಿದರು.

ಈ ದಾಳಿಯನ್ನು ಖಂಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸತೀಶ ಸೈಲ್ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿಗಳನ್ನೇ ಕೇಂದ್ರಿಕರಿಸಿ ಐಟಿ ದಾಳಿ ನಡೆಸಲಾಗುತ್ತಿದೆ. ಇದು ಬಿಜೆಪಿ ಪ್ರೇರಿತ ಐಟಿ ದಾಳಿ ಎಂದು ಟೀಕಿಸಿದ್ದಾರೆ.
ಒಟ್ಟಾರೆ ಈ ಐಟಿ ದಾಳಿಗಳು ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಹಣ ಹಾಗೂ ಮದ್ಯ ಸಂಗ್ರಹಿಸಿಟ್ಟಿದ್ದ ಜಿಲ್ಲೆಯ ಕೆಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಭಯ ಹುಟ್ಟಿಸಿದ್ದಂತೂ ಸುಳ್ಳಲ್ಲ.

loading...