ಮತದಾನಕ್ಕಾಗಿ ಕಾರ್ಮಿಕರಿಗೆ ವೇತನ ಸಹಿತ ರಜೆ

0
2
loading...

ಗದಗ: ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸೂಚನೆ ಹಿನ್ನಲೆಯಲ್ಲಿ ಎಲ್ಲ ಕಾರ್ಖಾನೆಗಳಲ್ಲಿನ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜೆಯನ್ನು ಘೋಷಿಸಲು ಕಾರ್ಖಾನೆಗಳ, ಬಾಯ್ಲರಗಳು, ಕೈಗಾರಿಕೆ ಸುರಕ್ಷತೆ ಹಾಗೂ ಸ್ವಾಸ್ಥ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದಾರೆ.
ಇಲಾಖೆಯ ಎಲ್ಲ ವಿಭಾಗಾಧಿಕಾರಿಗಳು ತಮ್ಮ ಕ್ಷೇತ್ರ ವ್ಯಾಪ್ತಿಯ ಎಲ್ಲ ಕಾರ್ಖಾನೆಗಳ ಆಡಳಿತ ವರ್ಗದವರಿಗೆ ಮತದಾನದ ದಿನ ಶನಿವಾರ ದಿ. 12 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಸುತ್ತೋಲೆ ಮೂಲಕ ತಿಳಿಸಲಾಗಿದೆ. ಅಲ್ಲದೇ ಎಲ್ಲ ಕಾರ್ಖಾನೆಗಳ ಆಡಳಿತ ವರ್ಗದವರು ಮತದಾನ ಹಕ್ಕು ಚಲಾಯಿಸಲು ಅವಕಾಶ ಮಾಡಿಕೊಟ್ಟಿರುವ ಕುರಿತು ನಿಗಾವಹಿಸಿ ವರದಿಯನ್ನು ನೀಡಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

loading...