ಮತದಾನದ ಜಾಗೃತಿ ಜಾಥಾಕ್ಕೆ ಡಿಸಿ ಎಸ್‌.ಬಿ.ಶೆಟ್ಟೆಣ್ಣವರ ಚಾಲನೆ

0
13
loading...

ವಿಜಯಪುರ: ಮತದಾನ ಜಾಗೃತಿ ಅಂಗವಾಗಿ ಅಂಗನವಾಡಿ ಶಿಕ್ಷಕಿಯರು ಹಾಗೂ ಕಾರ್ಯಕರ್ತೆಯರ ಬೃಹತ್‌ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಎಸ್‌.ಬಿ.ಶೆಟ್ಟೆಣ್ಣವರ ಚಾಲನೆ ನೀಡಿದರು.
ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಗಿತ್ತು. ಜಾಗೃತಿ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬರುವ ಮೇ.12 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಸ್ವೀಪ್‌ ಸಮಿತಿ, ಭಾರತ ಸರ್ಕಾರದ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದೊಂದಿಗೆ ಈ ಜಾಥಾ ಆಯೋಜಿಸಲಾಗಿತ್ತು. ಜಿಲ್ಲಾ ಪಂಚಾಯತ್‌ ಮುಖ್ಯ ಯೋಜನಧಿಕಾರಿ ದಶವಂತ, ಯೋಜನಾ ನಿರ್ದೇಶಕ ಕುಂಬಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಅಶೋಕ ಕೆಲವಡೆ, ನೆಹರು ಯುವ ಕೇಂದ್ರದ ಯುವ ಸಮನ್ವಯಾಧಿಕಾರಿ ಡಿ.ದಯಾನಂದ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ ನದಾಫ್‌, ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಮುರಳೀಧರ ಕಾರಭಾರಿ, ಅಂಗವಿಕಲ ಹಾಗೂ ಹಿರಿಯ ನಾಗರೀಕರ ಇಲಾಖೆ ಅಧಿಕಾರಿ ವಿ.ಜಿ.ಉಪಾಧ್ಯೆ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಮ್ಯಾಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

loading...