ಮಾಜಿ ಮುಖ್ಯಮಂತ್ರಿ ಜೋಗಿ ಅಸ್ವಸ್ಥ

0
32
loading...

ಗುರುಗ್ರಾಮ-ಛತ್ತೀಸ್ ಗಢದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ತೀವ್ರ ಅಸ್ವಸ್ಥರಾಗಿದ್ದು ಅವರನ್ನು ಹರಿಯಾಣದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.
ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆಯನ್ನು ಅಳವಡಿಸಲಾಗಿದೆ.
ಜೋಗಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಜೋಗಿ ಅವರ ದೇಹಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ನ್ಯೂಮೋನಿಯಾ ಪೀಡಿತರಾಗಿದ್ದ ಮಾಜಿ ಐಎಎಸ್ ಅಧಿಕಾರಿ ಹಾಗು ಛತ್ತೀಸ್ ಗಢದ ಮೊದಲ ಮುಖ್ಯಮಂತ್ರಿಯಾಗಿರುವ ಅಜಿತ್ ಜೋಗಿ ಅವರನ್ನು ನಿನ್ನೆ ಅಂಬುಲೆನ್ಸ್ ನಲ್ಲಿ ಮೇದಾಂತ ಆಸ್ಪತ್ರೆಗೆ ತರಲಾಗಿತ್ತು.
72 ರ ಹರೆಯದ ಛತ್ತೀಸ್ ಗಢದ ಜನತಾ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರಾಗಿರುವ ಜೋಗಿ ಅವರು ರಾಯ್ ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಜೋಗಿ ಅವರು ಪ್ರಕೃತ ವೆಂಟಿಲೇಟರ್ ನಲ್ಲಿ ಇದ್ದಾರೆ. ಆದರೂ ಅವರ ದೇಹಸ್ಥಿತಿ ಸ್ಥಿರವಾಗಿದೆ ಎಂದು ಹಿರಿಯ ಮೆಡಿಕಲ್ ಸುಪರಿಂಟೆಂಡೆಂಟ್ ಡಾ. ಎ ಕೆ ದುಬೆ ಹೇಳಿದ್ದಾರೆ.

loading...