ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಸಿದ್ದರಾಮಯ್ಯಗೆ ಸೂಚನೆ

0
41
loading...

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ-2018 ರ ಫಲಿತಾಂಶ ಪ್ರಕಟವಾಗಿದ್ದು, 2013-18 ರ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ. 

ರಾಜಭವನಕ್ಕೆ ತೆರಳಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆ ಅಂಗೀಕರಿಸಿರುವ ರಾಜ್ಯಪಾಲ ವಜುಭಾಯ್ ವಾಲ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದ್ದಾರೆ. 
ರಾಜಭವನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ ಸರ್ಕಾರ ರಚಿಸಲು ಜೆಡಿಎಸ್ ಗೆ ಬೆಂಬಲ ನೀಡುತ್ತೇವೆ, ಈ ಬಗ್ಗೆ ರಾಜ್ಯಪಾಲರೊಂದಿಗೆ ಚರ್ಚಿಸಿದ್ದೇನೆ, ರಾಜೀನಾಮೆ ಅಂಗೀಕರಿಸಿರುವ ರಾಜ್ಯಪಾಲರು ಉಸ್ತುವಾರಿ ಸಿಎಂ ಆಗಿ ಮುಂದುವರೆಯಲು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. 
loading...