ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ :ಬೆಳಗಾವಿಯಲ್ಲಿ ಸಂಭ್ರಮಾಚರಣೆ

0
67
loading...

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ :ಬೆಳಗಾವಿಯಲ್ಲಿ ಸಂಭ್ರಮಾಚರಣೆ .

ಕನ್ನಡಮ್ಮ ಸುದ್ದಿ

ಬೆಳಗಾವಿ 17: ಕರ್ನಾಟಕ ರಾಜ್ಯದ ೨೪ ನೆ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಇಂದು ಮುಂಜಾನೆ ೯ ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಿದ ಅಂಗವಾಗಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು .

ಗುರುವಾರ ಅತ್ತ ಬೆಂಗಳೂರುನಲ್ಲಿ ಬಿಜೆಪಿ ನಾಯಕ ಯಡಿಯೂರಪ್ಪ ರಾಜ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದಂತೆ ನಗರದಲ್ಲಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ, ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನೆಚ್ಚಿನ ನಾಯಕ ಮುಖ್ಯಮಂತ್ರಿ ಆಗಿದ್ದಕ್ಕೆ ಸಂಭ್ರಮಾಚರಣೆ ಮಾಡಿದರು .
ಈ ಸಂಧರ್ಭದಲ್ಲಿ ಮಹಾನಗರ ಬಿಜೆಪಿ ಘಟಕ ಅಧ್ಯಕ್ಷ ರಾಜೇಂದ್ರ ಹರಕುಣಿ ,ಮುಖಂಡರಾದ ರಾಜು ಚಿಕ್ಕನಗೌಡರ,ಲೀನಾ ಟೋಪ್ಪಣ್ಣವರ ,ದೀಪಕ ಜಮಕಂಡಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

loading...