ರಸ್ತೆ ಅಪಘಾತದಲ್ಲಿ ಶಾಸಕ ಸಿದ್ದು ನ್ಯಾಮಗೌಡ ನಿಧನ

0
27
loading...

ಬಾಗಲಕೋಟೆ: ಗೋವಾದಿಂದ ವಾಪಸ್ ಬರುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಜಮಖಂಡಿಯ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರು ವಿಧಿವಶರಾಗಿದ್ದಾರೆ.
70 ವರ್ಷದ ಸಿದ್ದು ನ್ಯಾಮಗೌಡ ಅವರು ಕಾರಿನಲ್ಲಿ ವಾಪಸ್ ಬರುತ್ತಿದ್ದಾಗ ಬಾಗಲಕೋಟೆಯ ತುಳುಸಿಗೇರಿ ಬಳಿ ಎದುರಿಗೆ ಬರುತ್ತಿದ್ದ ಲಾರಿಯನ್ನು ತಪ್ಪಿಸಲು ಹೋಗಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸಿದ್ದು ನ್ಯಾಮಗೌಡ ಅವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಅವರ ಎದುಗೆ ಗಂಭೀರ ಗಾಯವಾಗಿದ್ದರಿಂದ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ. ಆದರೆ ಬದುಕಿಸಿಕೊಳ್ಳುವ ಆಸೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ವೈದ್ಯರು ಸಿದ್ದು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ಸ್ಥಳಕ್ಕೆ ಪೊಲೀಸರು ದಾವಿಸಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಿದ್ದು ನ್ಯಾಮಗೌಡ ಅವರು ಭರ್ಜರಿ ಗೆಲುವು ಸಾಧಿಸಿದ್ದರು. ನ್ಯಾಮಗೌಡ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.

loading...